HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ: ಅಕ್ರಮವಾಗಿ ಮರ ಕಡಿದು ಸಾಗಾಟ – ಟೆಂಪೋ ಸಹಿತ ಆರೋಪಿ ಅರಣ್ಯ ಇಲಾಖೆಯ ವಶಕ್ಕೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ, ನದಿ ಬದಿಯಲ್ಲಿದ್ದ ಜಾಗದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ, ಮರಮಟ್ಟು ಸಹಿತ ವಾಹನವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಮಠ ಎಂಬಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡುವ ಬಗ್ಗೆ ಮಾಹಿತಿ ತಿಳಿದ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ದಾಖಲೆ ಪತ್ರವಿಲ್ಲದೆ ಮರಗಳನ್ನು ಕಡಿದು ಹಾಕಿ ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡುತ್ತಿದ್ದು ಲಾರಿ ಚಾಲಕ ಅಬೂಬಕ್ಕರ್  ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದು ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಕಾರ್‍ಯಚರಣೆಯಲ್ಲಿ ಉಪ್ಪಿನಂಗಡಿ ವಲಯ ಉಪ ಅರಣ್ಯಾಧಿಕಾರಿ ಸಂದೀಪ್, ರಾಯಣ್ಣ ಗೌಡ, ಅರಣ್ಯ ಪಾಲಕ ಮಾರುತಿ ಭಾಗವಹಿಸಿದ್ದು ವಲಯ ಅರಣ್ಯಾಧಿಕಾರಿ ಮಧುಸೂದನ್ ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಿರಂತರವಾಗಿ ನಡೆಯುವ ದಂಧೆ:
ಈ ಭಾಗದಲ್ಲಿ ಅದರಲ್ಲೂ ನದಿ ಪರಂಬೋಕು ಜಾಗಗಳಲ್ಲಿರುವ ಭಾರೀ ಮರಗಳು ಮರ ಕಳ್ಳರ ಪಾಲಾಗುತ್ತಿದ್ದು, ಆಗೊಮ್ಮೆ ಈಗೊಮ್ಮೆ ಮಾತ್ರ ಅರಣ್ಯ ಇಲಾಖೆ ಗಮನಕ್ಕೆ ಬಂದು ಪ್ರಕರಣ ದಾಖಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಆರೋಪಿತ ವ್ಯಕ್ತಿ ಕೆಲವೊಂದು ಜಾಗ ಸಮತಟ್ಟು ಮಾಡುವ ವ್ಯಕ್ತಿಗಳೊಂದಿಗೆ ಮರ ತೆಗೆದುಕೊಡುವ ವಿಚಾರ ಹೇಳಿಕೊಂಡು ಅರಣ್ಯ ಇಲಾಖೆಯಲ್ಲಿ ಮೇಲಿನಿಂದ ಕೆಳಗಿನ ತನಕ ಎಲ್ಲರೂ ಪರಿಚಿತರು, ಯಾವುದೇ ಪರವಾನಿಗೆ ಬೇಡ ಎಂದು ಹೇಳಿಕೊಂಡು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುವ ದಂಧೆ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಹೇಳಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.