ಆರ್ಯಾಪು:ಒಣ ತ್ಯಾಜ್ಯ ವಿಲೇವಾರಿ ಘಟಕ ಮಾಹಿತಿ ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ದ.ಕ ಜಿಲ್ಲಾ ಪಂಚಾಯತ್, ತಾ.ಪಂ ಪುತ್ತೂರು ಹಾಗೂ ಆರ್ಯಾಪು ಗ್ರಾ.ಪಂ ಇವುಗಳ ಸಂಯುಕ್ತ ಆಶ್ರಯದಲ್ಲಿ ಒಣ ತ್ಯಾಜ್ಯ ವಿಲೇವಾರಿ ಘಟಕ ಮಾಹಿತಿ ಕಾರ್ಯಾಗಾರವು ಅ.೧೫ರಂದು ಸಂಪ್ಯ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿ.ಫಮ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯೊಂದಿಗೆ ತ್ಯಾಜ್ಯ ಉತ್ಪಾದನೆಯ ಪ್ರಮಾಣವು ಅಧಿಕವಾಗುತ್ತಿದೆ. ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಾಗುತ್ತದೆ. ಹಸಿ ಕಸವನ್ನು ಆದಷ್ಟು ಮನೆಯಲ್ಲಿಯೇ ವಿಲೇವಾರಿ ಮಾಡಿಕೊಂಡು ಒಣ ಕಸವನ್ನು ಸಂಪನ್ಮೂಲ ಘಟಕದಲ್ಲಿ ನಿರ್ವಹಣೆ ಮಾಡಬೇಕಾಗಿದೆ ಎಂದರು.

ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಾರ್ಯನಿರ್ವಣಾಧಿಕಾರಿ ನವೀನ್ ಭಂಡಾರಿ, ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ಆರ್ಯಾಪು ಕಾರ್ಯದರ್ಶಿ ಅನುಷಾ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್‌ನ ನೆರವು ಘಟಕದ ನವೀನ್ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.