HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಹೆರಿಗೆ ವೇಳೆ ರಕ್ತಸ್ರಾವದಿಂದ ಬಾಣಂತಿ ಚಂದ್ರಕಲಾ ಸಾವು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹೆರಿಗೆ ವೇಳೆ ಅಧಿಕ ರಕ್ತಸ್ರಾವದಿಂದ ಬಾಣಂತಿಯೊಬ್ಬರು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಬಳ್ಳಿಕಾನ ನಿವಾಸಿ ಪ್ರವೀಣ್ ನಾಯ್ಕ್ ಎಂಬವರ ಪತ್ನಿ ಚಂದ್ರಕಲಾ (25) ಎಂಬವರು ಮೃತಪಟ್ಟವರು.
ಚಂದ್ರಕಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಹೆರಿಗಾಗಿ ದಾಖಲಾಗಿದ್ದರು. ಅಲ್ಲಿ ಹೆರಿಗೆ ವೇಳೆ ವಿಪರೀತ ರಕ್ತಸ್ರಾವವುಂಟಾಗಿತ್ತು. ರಕ್ತಸ್ರಾವ ಹೆಚ್ಚಾದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಕಲಾ ಮೃತಪಟ್ಟಿದ್ದಾರೆ. ಆದರೆ ಅದೃಷ್ಟವಶಾತ್ ಮಗು ಬದುಕುಳಿದಿದ್ದು ಆರೋಗ್ಯವಾಗಿದೆ. ಮೃತ ಚಂದ್ರಕಲಾ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಸುಬ್ಬಣ್ಣ ನಾಯ್ಕರ ಪುತ್ರಿಯಾಗಿದ್ದು ಅರಿಯಡ್ಕ ಗ್ರಾಮದ ಬಳ್ಳಿಕಾನ ನಿವಾಸಿ ಪ್ರವೀಣ್ ನಾಯ್ಕ್‌ರವರ ಪತ್ನಿಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.