HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅಧಿಕೃತ ಏಜೆನ್ಸಿಗಳ ಕೋಡ್ ಬಳಸಿ ನಕಲಿ ವಾಹನ ವಿಮೆ ಜಾಲ | ಸಮಗ್ರ ತನಿಖೆ ನಡೆಸುವಂತೆ ಶಾಸಕ ಸಂಜೀವ ಮಠಂದೂರು ಸೂಚನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಧಿಕೃತ ಏಜೆನ್ಸಿಗಳ ಕೋಡ್ ಬಳಸಿ ನಕಲಿ ವಾಹನ ವಿಮೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಅಧಿಕೃತ ಏಜೆಂಟ್ ನೀಡಿದ ಮೌಖಿಕ ದೂರಿನ ಅನ್ವಯ ಪುತ್ತೂರು ನಗರ ಠಾಣಾ ಪೊಲೀಸರು ಓರ್ವ ಆರ್‌ಟಿಒ ಮಧ್ಯವರ್ತಿಯೊಬ್ಬರನ್ನು ವಿಚಾರಣೆ ನಡೆಸಿದ ಘಟನೆ ಬೆಳಕಿಗೆ ಬಂದಿರುವ ಬೆನ್ನಲ್ಲೆ ಇಂತಹ ಮೋಸ ಜಾಲದಿಂದ ಮುಂದೆ ವಾಹನ ಅಪಘಾತ ಅಥವಾ ಜೀವ ಹಾನಿ ಸಂದರ್ಭ ಆಗುವ ಅನಾಹುತಕ್ಕೆ ಯಾರು ಹೊಣೆ ಎಂದು ಗಂಭೀರ ಚಿಂತನೆ ನಡೆಸಿದ ಶಾಸಕ ಸಂಜೀವ ಮಠಂದೂರು ಅವರು ತಕ್ಷಣ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಧಿಕೃತ ಏಜೆನ್ಸಿಗಳ ಕೋಡ್ ಬಳಸಿ ನಕಲಿ ವಾಹನ ವಿಮೆ ನೀಡಿರುವ ಕುರಿತು ವ್ಯಕ್ತಿಯೊಬ್ಬರು ಠಾಣೆಗ ಮೌಖಿಕ ದೂರು ನೀಡಿದ್ದರು. ಈ ಕುರಿತು ಓರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿಚಾರಣೆಗೆ ನಡೆಸಿ ಬಳಿಕ ದೂರು ನೀಡಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಈ ಕುರಿತು ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಯಾಗಿತ್ತು. ಇದೀಗ ಅ.೧೭ರಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಕರೆದ ಸಭೆಯಲ್ಲಿ ಅವರು ಸೂಚನೆ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.