HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಡಬ: ನಿರಂತರ ವಿದ್ಯುತ್ ಸಮಸ್ಯೆ, ಸರಿಪಡಿಸುವಂತೆ ಮನವಿ

Puttur_Advt_NewsUnder_1
Puttur_Advt_NewsUnder_1

ಕಡಬ: ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಬಿಗಡಾಯಿಸುತ್ತಿದ್ದು ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ವಲಯ ಸಮಿತಿಯ ವತಿಯಿಂದ ಕಡಬ ಮೆಸ್ಕಾಂಗೆ ಮನವಿ ಸಲ್ಲಿಸಲಾಯಿತು.

ಈ ಮೊದಲೇ ಕೊರೋನಾ ಸೋಂಕಿನಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ವಿದ್ಯುತ್ ಸಮಸ್ಯೆಯಿಂದಾಗಿ ಗ್ರಾಹಕರು, ವರ್ತಕರು, ಉದ್ದಿಮೆದಾರರು ಮತ್ತಷ್ಟು ಕಂಗೆಟ್ಟಿದ್ದಾರೆ. ವಾರದಲ್ಲಿ ೩ ದಿನ ಸೂಚನೆ ನೀಡಿ ವಿದ್ಯುತ್ ಸ್ಥಗಿತ ಮಾಡಿದರೆ ಇತರ ದಿನಗಳಲ್ಲಿ ಯಾವುದೇ ಸೂಚನೆ ಇಲ್ಲದೇ ದುರಸ್ತಿ ಇತ್ಯಾದಿ ಕೆಲಸಗಳ ನೆಪವೊಡ್ಡಿ ವಿದ್ಯುತ್ ಕಡಿತ ಮಾಡುತ್ತಿರುವುದು ವಿದ್ಯುತ್ ಬಳಕೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ಬೇರೆ ಬೇರೆ ಕಾರಣ ನೀಡಿ ಪದೇ ಪದೇ ವಿದ್ಯುತ್ ಕಡಿತಗೊಳಿಸುವುದನ್ನು ಒಂದು ವಾರದೊಳಗೆ ಸರಿಪಡಿಸದಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಮೆಸ್ಕಾಂ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಆದ್ದರಿಂದ ಈ ತೊಂದರೆಗಳನ್ನು ಪರಿಹರಿಸಿ ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿ ಎಂದು ಅವರು ಮನವಿ ನೀಡಿ ವಿನಂತಿಸಿದ್ದಾರೆ. ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಕಡಬ ಸಿಎ ಬ್ಯಾಂಕ್ ನಿರ್ದೇಶಕ ಸತೀಶ್ ನಾಕ್, ಡಿಸಿಸಿ ಸದಸ್ಯ ಶರೀಫ್ ಎ.ಎಸ್. ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಬು ಮುಗೇರ, ಇಂಜಿನಿಯರ್ ಮನೋಜ್ ಕೃಷ್ಣ ಬಳ್ಳೇರಿ, ಪ್ರಮುಖರಾದ ಮುಕ್ತಾರ್ ಮೂಲೆಮನೆ, ಮುರ್ಸನ್ ಕಡಬ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.