ಸುಭಾಷ್ ಪಟ್ಟಾಜೆಗೆ ಡಾಕ್ಟರೇಟ್ ಪದವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ನಿರ್ವಹಿಸಿದ ಸುಭಾಷ್ ಪಟ್ಟಾಜೆ ಅವರ ಕನ್ನಡ ಮತ್ತು ಮಲಯಾಳಂ ಸಣ್ಣಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ.

ಡಾ. ಮಹೇಶ್ವರಿ ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಅವರು ಕನ್ನಡ ಮತ್ತು ಮಲಯಾಳಂ ಸಣ್ಣಕತೆಗಳಲ್ಲಿ ಪರಕೀಯ ಪ್ರಜ್ಞೆಯನೆಲೆಗಳು- ಒಂದು ತೌಲನಿಕ ಅಧ್ಯಯನ ಎಂಬ ಮಹಾಪ್ರಬಂಧ ಸಲ್ಲಿಸಿದ್ದರು. ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ. ಚೆಡೆಕಲ್ಲು- ಪಟ್ಟಾಜೆ ನಿವಾಸಿ ವಿಘ್ನೇಶ್ವರ ಪಿ ಮತ್ತು ಸವಿತಾ ದಂಪತಿ ಪುತ್ರರಾಗಿರುವ ಸುಭಾಷ್ ಪಟ್ಟಾಜೆ ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ೨೦೧೬ ರಿಂದ ೨೦೨೦ ರವರೆಗೆ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸುತ್ತ ಇವರು ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಸ್ಕೂಲಿನಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.