ಪುತ್ತೂರು:ರೈತ ಹಿತರಕ್ಷಣಾ ವೇದಿಕೆ ಪುತ್ತೂರು ಇದರ ವತಿಯಿಂದ ಕೇಂದ್ರ ಸರಕಾರದ ಕೃಷಿ ಮಸೂದೆ -೨೦೨೦ರ ಸಾಧಕ-ಬಾಧಕ ಕುರಿತ ವಿಚಾರ ಸಂಕಿರಣವು ಅ.೧೮ರಂದು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದುರವರು ತೆಂಗಿನ ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿದರು. ರೈತ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮಸೂದೆಯ ಸಾಧಕ-ಬಾಧಕಗಳ ಕುರಿತು ರಾಜ್ಯ ಬಿಜೆಪಿ ಕಾರ್ಯಕರ್ತರ ತರಬೇತಿ ಘಟಕದ ಮಾಜಿ ಸಂಚಾಲಕ ವಿಶ್ವೇಶ್ವರ ಭಟ್ ಬಂಗಾರಡ್ಕ ವಿಷಯ ಮಂಡಿಸಿದರು.
ಗ್ರಾಮೀಣಾಭಿವೃದ್ಧಿ ತಜ್ಞ ಸುರೇಶ ಕಂಜರ್ಪಣೆ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ.ಬಿ ಸದಾಶಿವರವರು ವಿಷಯ ವಿಮರ್ಶೆ ನಡೆಸಿಕೊಟ್ಟರು. ವಕೀಲರು, ಪ್ರಗತಿಪರ ಕೃಷಿ ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ಸಂಯೋಜಿಸಿದರು.
ನ್ಯಾಯವಾದಿ ಭಾಸ್ಕರ ಕೋಡಿಂಬಾಳ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಕೆದಂಬಾಡಿ ಗ್ರಾ.ಪಂ ಮಾಜಿ ಸದಸ್ಯ ಚಂದ್ರಹಾಸ ರೈ ಬೋಳೋಡಿ, ಪುರಸಭಾ ಮಾಜಿ ನ ಸದಸ್ಯ ಮೊಯಿದು ಕುಂಞಿ, ಕೆಯ್ಯೂರು ಗ್ರಾ.ಪಂ ಮಾಜಿ ಸದಸ್ಯ ಎ.ಕೆ ಜಯರಾಮ ರೈ, ಮಹೇಶ್ ರೈ ಅಂಕೊತ್ತಿಮಾರ್, ಬ್ಲಾಕ್ ಮಾಜಿ ಅಧ್ಯಕ್ಷ ಫಝಲ್ ರಹೀಮ್, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಶ್ರೀ ರಾಮ್ ಪಕ್ಕಳ, ಮಾಜಿ ಸದಸ್ಯ ರಮೇಶ್ ರೈ ಸಾಂತ್ಯ, ಲ್ಯಾನ್ಸಿ ಮಸ್ಕರೇನಸ್, ವಿಕ್ರಮ್ ರೈ ಸಾಂತ್ಯ, ಜೆಡಿಎಸ್ ಅಧ್ಯಕ್ಷ ಅಶ್ರಪ್ ಕಲ್ಲೇಗ, ರೈತ ಸಂಘದ ಜಿಲ್ಲಾ ಸಂಚಾಲಕ ರನಡೆಸಿದರು ಅಲಿಮಾರ್, ದಯಾನಂದ ರೈ ಮನವಳಿಕೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವೆಂಕಪ್ಪ ಗೌಡ, ನಗರ ಸಭಾ ಮಾಜಿ ಸದಸ್ಯ ಅನ್ವರ್ ಖಾಸಿಂ, ಐ.ಸಿ ಕೈಲಾಸ್, ಕೆಪಿಸಿಸಿ ಸದಸ್ಯ ಡಾ.ರಘು ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೆಲವು ಮಂದಿ ಪ್ರಮುಖರು ಝೂಮ್ ಆಪ್ ವಿಚಾರ ವಿಮರ್ಶೆ ಮಾಡಿದರಯ.
ರೈತ ಹಿತ ರಕ್ಷಣಾ ವೇದಿಕೆ ಕಾರ್ಯದರ್ಶಿ ನವೀನ್ ರೈ ಚೆಲ್ಯಡ್ಕ ಸ್ವಾಗತಿಸಿದರು. ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರೈತಗೀತೆ ಹಾಡಿದರು.