HomePage_Banner
HomePage_Banner
HomePage_Banner

ನವೆಂಬರ್‌ನಲ್ಲಿ ಕಾಲೇಜು ತೆರೆಯಲು ಸಿದ್ಧತೆ ಸಿಎಂ ಜೊತೆ ಚರ್ಚಿಸಿ ದಿನಾಂಕ ನಿಗದಿ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ನವೆಂಬರ್ ತಿಂಗಳಿನಿಂದ ಕಾಲೇಜುಗಳನ್ನು ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.

ಈಗಾಗಲೇ ಎಲ್ಲಾ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿಗಳು ಉತ್ತಮವಾಗಿ ನಡೆಯುತ್ತಿವೆ. ಡಿಜಿಟಲ್ ಕಲಿಕೆ, ಬೋಧನೆ ನಿರೀಕ್ಷೆಗೂ ಮೀರಿ ನಡೆಯುತ್ತಿದೆ. ಯುಜಿಸಿಯಿಂದ ಕಾಲೇಜು ಆರಂಭಕ್ಕೆ ಸೂಕ್ತ ಮಾಹಿತಿ, ಮಾರ್ಗಸೂಚಿ ಬಂದಿದೆ.ಅದರ ಅನ್ವಯ ಎಲ್ಲಾ ಸಿದ್ಧತೆ ಮಾಡಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಆಫ್‌ಲೈನ್ ತರಗತಿಗಳು ಆರಂಭವಾಗಲಿ ಎಂದು ಹೇಳುತ್ತಿದ್ದಾರೆ.ಶೀಘ್ರ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕಾಲೇಜು ಆರಂಭ ದಿನಾಂಕ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಕಾಲೇಜುಗಳ ತೆರೆಯಲು ನಿರ್ಧರಿಸಲಾಗಿದೆ. ಆದರೆ, ಆಫ್‌ಲೈನ್ ಮತ್ತು ಆನ್‌ಲೈನ್ ತರಗತಿಗಳ ಕುರಿತ ಆಯ್ಕೆ ವಿದ್ಯಾರ್ಥಿಗಳಿಗೇ ನೀಡಲು ಚಿಂತನೆಗಳು ನಡೆಯುತ್ತಿವೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ.ಈ ನಡುವೆ ವಿವಿಧ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಸಭೆ ನಡೆಸಿ ಮಾತುಕತೆ ನಡೆಸಿದ್ದು, ಸಭೆಯಲ್ಲಿ ಅಗತ್ಯ ಬಿದ್ದರೆ, ಭಾನುವಾರದ ದಿನಗಳಲ್ಲೂ ತರಗತಿ ನಡೆಸಲು ಸಲಹೆಗಳು ಬಂದಿವೆ.ಇದಲ್ಲದೆ, ಕಾಲೇಜುಗಳನ್ನು ಯಾವ ರೀತಿ ತೆರೆಯಬಹುದು, ವೇಳಾಪಟ್ಟಿ ಹೇಗಿರಬೇಕೆಂಬುದರ ಕುರಿತಂತೆ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.