HomePage_Banner
HomePage_Banner
HomePage_Banner

ಕಡಬದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

ಕಡಬ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ಅ.೨೩ ರಂದು ಕಾಂಗ್ರೆಸ್ ಸಮಿತಿ ಹಾಗೂ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಕಡಬ ತಾಲೂಕು ಕಚೇರಿಯೆದುರು ಪ್ರತಿಭಟನೆ ನಡೆಯಿತು. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೌಡ ಕೈಕುರೆಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿದರು.

ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿಪಿ ವರ್ಗೀಸ್, ಕೆಪಿಸಿಸಿ ಸದಸ್ಯ ಡಾಕ್ಟರ್ ರಘು ಬೆಳ್ಳಿಪಾಡಿ, ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬಳ್ಳೇರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿಜಯ ಕುಮಾರ್ ರೈ, ಕಾರ್ಯದರ್ಶಿಗಳಾದ ಎಚ್ಕೆ ಇಲಿಯಾಸ್, ಸೈಮನ್ ಸಿಜೆ, ಡಿಸಿಸಿ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಎ ಎಸ್ ಶೆರೀಪ್, ಕಡಬ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಬು ಮುಗೇರ, ಮರ್ದಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ನಡು ಮಜಲು, ಕಡಬ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಸೇವಿಯರ್ ಬೇಬಿ ತೋಮಸ್ ಇಡೆಯಾಳ, ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಕಡಬ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಭವಾನಿಶಂಕರ್ ಮೇಲಾಂಟ, ಎಪಿಯಂಸಿ ಮಾಜಿ ಸದಸ್ಯ. ರಾಮಕ್ರಷ್ಣ ಹೊಳಾರು, ಕಡಬ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಡೆನಿಸ್ ಫೆರ್ನಾಂಡಿಸ್, ದಲಿತ ಮುಖಂಡರಾದ ವಸಂತ ಕುಬುಲಾಡಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ, ತಾಲೂಕು ಸಂಚಾಲಕ ಶೀನಾ ಬಾಳಿಲ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಳಿಕ ಕಡಬ ಕಂದಾಯ ಅಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ಮನವಿ ಸ್ವೀಕರಿಸಿದರು. ಕಡಬ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅದ್ಯಕ್ಷ ಶಶಿದರ್ ಬೊಟ್ಟಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.