HomePage_Banner
HomePage_Banner
HomePage_Banner

ಅ.27: ಹಿರೇಬಂಡಾಡಿ ಗ್ರಾ.ಪಂ.ಘನತ್ಯಾಜ್ಯ ಘಟಕದ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ

Puttur_Advt_NewsUnder_1
Puttur_Advt_NewsUnder_1

ಹಿರೇಬಂಡಾಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಹಿರೇಬಂಡಾಡಿ ಗ್ರಾಮ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ)ಯೋಜನೆ ‘ಸ್ವಚ್ಛೋತ್ಸವ-ನಿತ್ಯೋತ್ಸವ’ ಮಾಸಾಚರಣೆ ಪ್ರಯುಕ್ತ ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಅ.27ರಂದು ನಡೆಯಲಿದೆ.
ಶಾಸಕ ಸಂಜೀವ ಮಠಂದೂರುರವರು ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಂಬೇಡ್ಕರ್ ಭವನದಲ್ಲಿ ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿ.ಪಂ.ಸದಸ್ಯೆ ಶಯನಾ ಜಯಾನಂದ್, ತಾ.ಪಂ.ಸದಸ್ಯ ಮುಕುಂದ ಬಜತ್ತೂರು, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್.ಸೆಲ್ವಮಣಿ, ಉಪಕಾರ್ಯದರ್ಶಿ ಆನಂದ ಕುಮಾರ್, ಪುತ್ತೂರು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಹಿರೇಬಂಡಾಡಿ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಹಮ್ಮಬ್ಬ ಶೌಕತ್ ಆಲಿಯವರು ಭಾಗವಹಿಸಲಿದ್ದಾರೆ ಎಂದು ಗ್ರಾ.ಪಂ.ಪ್ರಕಟಣೆ ತಿಳಿಸಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.