HomePage_Banner
HomePage_Banner
HomePage_Banner

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಯುಧ ಪೂಜಾ ಸಂಭ್ರಮ

Puttur_Advt_NewsUnder_1
Puttur_Advt_NewsUnder_1
  • ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಸರ್ವಧರ್ಮೀಯರ ಪಾಲ್ಗೊಳ್ಳುವಿಕೆಯಲ್ಲಿ ನಡೆದ ಕಾರ್ಯಕ್ರಮ


ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಶಕ್ತಿ ದುರ್ಗೆಯ ಆರಾಧನೆ ಹಾಗೂ ಆಯುಧ ಪೂಜಾ ವಿಧಿವಿಧಾನಗಳು ಅರ್ಚಕ ಕೃಷ್ಣ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಸರ್ವಧರ್ಮೀಯರ ಪಾಲ್ಗೊಳ್ಳುವಿಕೆಯೊಂದಿಗೆ ಸಂಪನ್ನಗೊಂಡಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಧಾರ್ಮಿಕ ವಿಧಿವಿಧಾನಗಳ ನೇತೃತ್ವವನ್ನು ವಹಿಸಿ ಮಾತನಾಡಿ ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಕಚೇರಿಯಲ್ಲಿ ಎಲ್ಲಾ ವರ್ಗದ ಜನರು ಸೇರಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡು ಬರಲಗುತ್ತಿದ್ದು ಬಹುಷಃ ಪಕ್ಷದ ಹೆಸರಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡು ಬಂದಿರುವುದು ಪುತ್ತೂರಿನಲ್ಲಿ ಮಾತ್ರ ಎಂದು ಅವು ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಉಸ್ತುವಾರಿ ನಿರ್ವಹಿಸಿ ಮಾತನಾಡಿ ಜಾತ್ಯಾತೀತ ಭಾರತದಲ್ಲಿ ಸೌಹಾರ್ದತೆಯ ಮೂಲಕ ಇಂತಹ ಕಾರ್ಯಕ್ರಮ ಹಮ್ಮಿಕೊಂಡು ಬಂದಿರುವುದು ಎಲ್ಲರ ಭಾವನೆಗಳನ್ನು ಒಂದುಗೋಡಿಸುವ ಕೆಲಸವಾಗಿದೆ ಎಂದರು. ಇದೇ ಸಂದರ್ಭದಲ್ಲಿ ವಾಹನ ಪೂಜೆ ಮತ್ತು ಶಕ್ತಿ ಮಾತೆಗೆ ಮಹಾಪೂಜೆ ನೆರವೇರಿತು. ಪೂಜಾ ಸಮಾರಂಭದಲ್ಲಿ, ಕೆಪಿಸಿಸಿ ಸದಸ್ಯ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ ಉಪ್ಪಿನಂಗಡಿ, ಪುತ್ತೂರು ಬ್ಲಾಕ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ.ಸೋಜಾ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿರುವ ಕೃಷ್ಣಪ್ರಸಾದ್ ಆಳ್ವ ಮತ್ತು ಅಮಲ ರಾಮಚಂದ್ರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಾಕೂಬ್ ಹಾಜಿ ದರ್ಭೆ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ಶೆಟ್ಟಿ, ಹಸೈನಾರ್ ಬನಾರಿ, ಕಾಂಗ್ರೆಸ್ ಜಾಲತಾಣದ ಪೂರ್ಣೇಶ್, ಅಕ್ಷರ್ ಕಲ್ಲೇಗ, ಸರ್ವೆಶ್ ಬನ್ನೂರು, ರಾಮಚಂದ್ರ ನಾಯ್ಕ, ಗೋಪಾಲ ಪೂಜಾರಿ, ರವಿ ಮೊಟ್ಟೆತ್ತಡ್ಕ, ಪ್ರತೀಕಾ ಪೂರ್ಣೇಶ್, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಪುನೀತ್ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.