HomePage_Banner
HomePage_Banner
HomePage_Banner
Breaking News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಯತ್ನ | ಪುತ್ತೂರು ಮೂಲದ ಪ್ರಯಾಣಿಕನಿಂದ ರೂ. 32.96ಲಕ್ಷ ಚಿನ್ನ ವಶ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪುತ್ತೂರು ಮೂಲದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ ರೂ. 32.96ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಅ.26ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ ಪುತ್ತೂರು ನೆಟ್ಟಣಿಗೆ ಗುಳಿಗಕಲ್ಲು ನಿವಾಸಿ ಮೋಯಿದಿ ಕುಂಞಿ ಅವರ ಪುತ್ರ ಅಬೂಬಕ್ಕರ್ ಸಿದ್ದಿಕ್(37 ವ) ಎಂಬವರು ಬಂಧಿತ ಆರೋಪಿ. ಅವರು ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟುಕೊಂಡಿದ್ದರು. ಆರೋಪಿಯಿಂದ ರೂ.  32,96,800 ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಬೂಬಕ್ಕರ್ ಅವರು ತನ್ನ ಗುದದ್ವಾರದಲ್ಲಿ ಚಿನ್ನ ವನ್ನು ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ತಂದಿದ್ದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಪತ್ತೆ ಹಚ್ಚಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.