HomePage_Banner
HomePage_Banner
HomePage_Banner

ಕೋವಿಡ್ -೧೯ ನಿಯಮ ಪಾಲನೆಯಿಂದ ಸಂಭ್ರಮ ಕಳೆದುಕೊಂಡ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

Puttur_Advt_NewsUnder_1
Puttur_Advt_NewsUnder_1
  • ಕಿಲ್ಲೆ ಮೈದಾನದಲ್ಲಿ ರಾಷ್ಟ್ರ ಧ್ವಜ, ಕನ್ನಡ ಧ್ವಜಾರೋಹಣ – ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಪುತ್ತೂರು: ಕನ್ನಡ ತಾಯಿ ಭುವನೇಶ್ವರಿ ದೇವಿ ವಿಗ್ರಹದೊಂದಿಗೆ ಮೆರವಣಿಗೆ, ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕನ್ನಡದ ಕುರಿತು ಉಪನ್ಯಾಸ ಸೇರಿದಂತೆ ಅತ್ಯಂತ ಸಂಭ್ರಮದಿಂದ ತಾಲೂಕು ಮಟ್ಟದಲ್ಲಿ ಆಚರಿಸಿಕೊಂಡು ಬರುತ್ತಿರುವ ಕನ್ನಡ ರಾಜ್ಯೋತ್ಸವಕ್ಕೆ ಈ ಭಾರಿ ಕೋವಿಡ್ -೧೯ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿಕೊಂಡೇ ನ.೧ರಂದು ತಾಲೂಕು ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿಯಿಂದ ಸರಳ ರೀತಿಯಲ್ಲಿ ಆಚರಿಸಲಾಯಿತು. ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ವಿಭಾಗದಲ್ಲಿ ಅತ್ಯಂತ ಅಂಕ ಗಳಿಸಿದ ಕಾಣಿಯೂರು ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಮಡಿಲೆಣ್ಣುಕ(ಲ್ಯಾಪ್‌ ಟಾಪ್)‌ ವಿತರಣೆ ಮಾಡಲಾಯಿತು. 

ಬೆಳಿಗ್ಗೆ ಕಿಲ್ಲೆ ಮೈದಾನದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಾರೋಹಣ ಮಾಡಿ ಗೌರವ ಸೂಚಿಸಲಾಯಿತು. ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಶಾಸಕ ಸಂಜೀವ ಮಠಂದೂರು ಅವರು ಕನ್ನಡ ಧ್ವಜಾರೋಹಣ ಮಾಡಿದರು. ಇದೇ ಸಂದರ್ಭದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಅವರು ಕನ್ನಡ ರಾಜ್ಯೋತ್ಸವ ಸಂದೇಶ ಸಾರಿದರು. ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್ ಅವರ ನೇತೃತ್ವದಲ್ಲಿ ಧ್ವಜವಂದನೆ ಪೆರೇಡ್ ನಡೆಯಿತು. ಎ.ಎಸ್ಪಿ ಲಖನ್ ಸಿಂಗ್ ಯಾದವ್, ನಗರ ಪೊಲೀಸ್ ಠಾಣೆಯ ನಿರೀಕ್ಷಕ ಗೋಪಾಲ್ ನಾಯ್ಕ್, ತಹಸೀಲ್ದಾರ್ ರಮೇಶ್ ಬಾಬು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ಬಳಿಕ ಪುರಭವನದ ಸಭಾಭವನದಲ್ಲಿ ಕನ್ನಡ ಜ್ಯೋತಿ ಪ್ರಜ್ವಲನೆ ಮಾಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.