ಫಿಲೋಮಿನಾ ಕಾಲೇಜಿನ ಆಶಿತ್ ವಿ ಕೆರವರಿಗೆ ಡಾಕ್ಟರೇಟ್ ಪದವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಆಶಿತ್ ವಿ ಕೆ ರವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ.

ಇವರು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಾಹೆಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ। ಗೌರೀಶ್ ರಾವ್ ಕೆ ರವರ ಮಾರ್ಗದರ್ಶನದಲ್ಲಿ “Characterisation of Silar Deposited Binary and Ternary Compound Semiconductor Thin Films” ಎಂಬ ವಿಷಯದ ಕುರಿತು ತಮ್ಮ ಡಾಕ್ಟರೇಟ್ (Ph.D.) ಪದವಿಗಾಗಿ ಮಹಾ ಪ್ರಬಂಧವನ್ನು ಮಂಡಿಸಿರುವರು. ಪ್ರಯೋಗಾತ್ಮಕ ಭೌತಶಾಸ್ತ್ರ ಕ್ಷೇತ್ರದಲ್ಲಿ ಇವರ ಸಂಶೋಧನೆಗಳು ಅನೇಕ ರಾಷ್ಟ್ರೀಯ, ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿರುತ್ತದೆ. ಸಂಶೋಧನೆಗೆ ಪೂರಕವಾಗಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ; ಭಾಭಾ ಅಟಾಮಿಕ್ ರಿಸರ್ಚ್ ಸೆಂಟರ್, ಮುಂಬೈ; ಶಾಸ್ತ್ರ ಯೂನಿವರ್ಸಿಟಿ, ತಂಜಾವೂರು; ಸಂತ ಥಾಮಸ್ ಕಾಲೇಜು, ಪಾಲ; ನಿರ್ಮಲಗಿರಿ ಕಾಲೇಜು, ಕಣ್ಣೂರು; ಮಂಗಳೂರು ವಿಶ್ವವಿದ್ಯಾನಿಲಯ; ಇವುಗಳಲ್ಲಿ ನಡೆದ ರಾಷ್ಟ್ರೀಯ – ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಅನೇಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುತ್ತಾರೆ.

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಎಸ್ಸಿ. ಪದವಿ, ಮಂಗಳೂರು ವಿವಿಯಲ್ಲಿ ಎಂ.ಎಸ್ಸಿ ಪದವಿಯನ್ನು ಭೌತಶಾಸ್ತ್ರ ವಿಷಯದಲ್ಲಿ ಉನ್ನತ ಶ್ರೇಣಿಯೊಂದಿಗೆ ಪೂರೈಸಿರುತ್ತಾರೆ. 2019ರಿಂದ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆಶಿತ್ ವಿ ಕೆರವರು ಬಂಟ್ವಾಳ ತಾಲೂಕಿನ ಕಲ್ಲಡ್ಕ ನೆಟ್ಲದ ಶ್ರೀ ವಿಜಯ ಕುಮಾರ್ ಹಾಗೂ ಶ್ರೀಮತಿ ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.