HomePage_Banner
HomePage_Banner
HomePage_Banner

ಫಿಲೋಮಿನಾ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನ.1ರಂದು ೬೫ನೇ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.

ಸಂತ ಫಿಲೋಮಿನಾ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ವಂ|ಸುನಿಲ್ ಜಾರ್ಜ್ ಡಿ’ಸೋಜರವರು ಧ್ವಜಾರೋಹಣವನ್ನು, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್‌ರವರು ನಾಡ ಧ್ವಜಾರೋಹಣವನ್ನು ನೆರವೇರಿಸಿದರು. ವಂ|ಸುನಿಲ್ ಜಾರ್ಜ್ ಡಿ’ಸೋಜಾರವರು ಮಾತನಾಡಿ, ಮೈಸೂರು ರಾಜ್ಯವು ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಲು ಚಳುವಳಿಗಳನ್ನು ನಡೆಸಿದವರು ಆಲೂರು ವೆಂಕಟರಾವ್, ಅ.ನ.ಕೃ,ಶಿವರಾಮ ಕಾರಂತ, ಕುವೆಂಪು, ಮಾಸ್ತಿ, ಬಿ.ಎಂ.ಶ್ರೀ ಇವರೆಲ್ಲರ ಶ್ರಮದ ಫಲದಿಂದಲೇ ಕರ್ನಾಟಕವಾಯಿತು ಎಂದು ಹೇಳಿದರು.

ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೊರವರು ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಲಾನ್ಸಿ ಮಸ್ಕರೇನ್ಹಸ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಗುರುಗಳಾದ ಲಿಯೋನಿಲ್ಲಾ ಸಿ.ವೇಗಸ್ ಸ್ವಾಗತಿಸಿದರು, ವಿಜ್ಞಾನ ಸಹ-ಶಿಕ್ಷಕರಾದ ರಿಚಾರ್ಡ್ ವೇಗಸ್‌ರವರು ವಂದಿಸಿದರು. ಹಿಂದಿ ಸಹ ಶಿಕ್ಷಕಿ ಶ್ರೀಮತಿ ಕಾರ್ಮಿನ್ ಪಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.