HomePage_Banner
HomePage_Banner
HomePage_Banner

ಶಿಶು ಅಭಿವೃದ್ಧಿ ಇಲಾಖೆಯ ಕ್ಷೇತ್ರ ಸಮನ್ವಯ ಸಮಿತಿ, ಪೋಷಣಾ ಅಭಿಯಾನ ಸಮಿತಿ ಸಭೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ಸಮನ್ವಯ ಸಮಿತಿ ಹಾಗೂ ಪೋಷಣಾ ಅಭಿಯಾನದ ಸಭೆಯು ನ.6ರಂದು ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್‌ರವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮಾಹಿತಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎಲ್ಲಾ ಇಲಾಖೆಗಳಿಗೂ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸಬೇಕಾಗಿದೆ. ಅಂಗನವಾಡಿಗಳಲ್ಲಿ ೩೦ ವರ್ಷ ಮೇಲ್ಪಟ್ಟ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆಯ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿ ಮನೆಗಳ ತಲುಪಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರಾಮುಖ್ಯ. ಹಾಗಿದ್ದರೂ ನಾವು ಇಂದಿಗೂ ಗೌರವಧನದಲ್ಲಿಯೇ ಜೀವಿಸುವಂತಾಗಿದೆ. ಸಮಾನ ವೇತನ, ಗೌರವಗಳು ದೊರೆಯುತ್ತಿಲ್ಲ. ಕೋವಿಡ್ ಸಂದರ್ಭದಲ್ಲಿಯೂ ಇತರ ಇಲಾಖೆಗಳಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸ ನಿರ್ವಹಿಸಿದ್ದರೂ ಆಶಾ ಕಾರ್ಯಕರ್ತೆಯರಿಗೆ ದೊರೆತ ಗೌರವಗಳು ನಮಗೆ ದೊರೆತಿಲ್ಲ ಎಂಬ ನೋವು ಅವರಲ್ಲಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಸಮನ್ವಯ ಸಮಿತಿ ಅಧ್ಯಕ್ಷರು, ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಮಾತನಾಡಿ, ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಮೊಟ್ಟೆ ಬೆಲೆ ಏರಿಕೆಯಾಗುತ್ತಿದ್ದು ಅಂಗನವಾಡಿ ಮಕ್ಕಳಿಗೆ ಹಾಗೂ ಮಾತೃಪೂರ್ಣ ಯೋಜನೆಯಲ್ಲಿ ಕಾರ್ಯಕರ್ತೆಯರಿಗೆ ಅಧಿಕ ಹೊರೆಯಾಗುತ್ತಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯ ಗಮನ ಸೆಳೆದಿದ್ದು ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಸಹಾಯಕ ಆಯುಕ್ತರು ತಿಳಿಸಿದರು. ಪುಟಾಣಿಗಳಿಗೆ ಪೌಷ್ಠಿಕ ಆಹಾರ ನೀಡುವ ನಿಟ್ಟಿನ್ಲಲಿ ಪ್ರತಿ ಅಂಗನವಾಡಿಗಳಲ್ಲೂ ಪೌಷ್ಠಿಕ ತೋಟ ನಿರ್ಮಾಣ ಕಾರ್ಯಗಳು ನಡೆಯುತ್ತಿದೆ ಎಂದು ಯೋಜನಾಧಿಕಾರಿಗಳು ತಿಳಿಸಿದರು.

ಅಂಗನವಾಡಿ ಕಟ್ಟಡಗಳಿರುವ ನಿವೇಶನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು ಸದರಿ ನಿವೇಶನಗಳನ್ನು ಗಡಿ ಗುರುತು ಮಾಡಿ ಭದ್ರಪಡಿಸಿಕೊಳ್ಳುವ ಜವಾಬ್ದಾರಿಯನ್ನು ಆಯಾ ಇಲಾಖೆಯೇ ನಿರ್ವಹಿಸಬೇಕು ಎಂದು ಸಭೆಯಲ್ಲಿ ತಿಳಿಸಲಾಗಿದೆ.

ಕರಪತ್ರ ಬಿಡುಗಡೆ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯಗಳ ಮಾಹಿತಿಯಿರುವ ಕರಪತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಸಮನ್ವಯ ಸಮಿತಿ ಸದಸ್ಯರಾದ ತಹಶೀಲ್ದಾರ್ ರಮೇಶ್ ಬಾಬು, ಪೌರಾಯುಕ್ತೆ ರೂಪಾ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ತಾ.ಪಂ ವಿಷಯ ನಿರ್ವಾಹಕ ಶಿವಪ್ರಕಾಶ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಹಾಗೂ ಸಿಬಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.