HomePage_Banner
HomePage_Banner
HomePage_Banner

ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
  • ಸಾಧನೆಯ ಓಟದೊಂದಿಗೆ ಲೋಕಜ್ಞಾನ ಅಗತ್ಯ : ಡಾ|| ಧನಂಜಯ ಕುಂಬ್ಳೆ

ಉಪ್ಪಿನಂಗಡಿ :- ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳಾದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ವಿಶ್ವವಿದ್ಯಾನಿಲಯ ಇಲ್ಲಿನ ಪಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರು ವಿದ್ಯಾರ್ಥಿಗಳ ಸಂಪೂರ್ಣ ಬೆಳವಣಿಗೆಗೆ ಅಂತರ್ ನಿರೀಕ್ಷೆಯೊಂದಿಗೆ ಲೋಕಜ್ಞಾನ ಅತ್ಯಂತ ಮುಖ್ಯವಾದುದು ಎಂದರು.

ಕಾರ್‍ಯಕ್ರಮದಲ್ಲಿ ಒಟ್ಟು ಮೂವತ್ತನಾಲ್ಕು ಸಾಧಕ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನ ಅತ್ಯುತ್ತಮ ವಿದ್ಯಾರ್ಥಿಯಾಗಿ ಸುಹಾಸ್ ಎಂ.ಕೆ ಯವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಕಾರ್‍ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಯು.ಎಸ್.ಎ.ನಾಯಕ್, ಪ್ರಾಂಶುಪಾಲರಾದ ಹೆಚ್.ಕೆ ಪ್ರಕಾಶ್, ವಿದ್ಯಾಲಯದ ಮುಖ್ಯಶಿಕ್ಷಕರಾದ ಜೋಸ್ ಎಮ್.ಜೆ ಯವರು ಉಪಸ್ಥಿತರಿದ್ದರು. ಕಾರ್‍ಯಕ್ರಮವನ್ನು ರಸಾಯನಶಾಸ್ತ್ರ ಉಪನ್ಯಾಸಕಿ ಜಯಂತಿ ಎ.ಕೆ ಯವರು ಸ್ವಾಗತಿಸಿ ಜೀವಶಾಸ್ತ್ರ ಉಪನ್ಯಾಸಕಿ ಹರಿನಾಕ್ಷಿಯವರು ವಂದನೆಗೈದು, ಭೌತಶಾಸ್ತ್ರ ಉಪನ್ಯಾಸಕಿ ಸ್ವಾತಿ ಎಮ್ ರವರು ಕಾರ್‍ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.