HomePage_Banner
HomePage_Banner
HomePage_Banner

ಬಿಜೆಪಿ ಗ್ರಾಮಾಂತರ ಮಂಡಲ ಹಿಂದುಳಿದ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಪುತ್ತೂರು ರೋಟರಿ ಜಿ. ಎಲ್. ಸಭಾಭವನದಲ್ಲಿ ನ.೯ ರಂದು ನಡೆಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ ತಳಮಟ್ಟದಿ ಸಂಘಟನೆ ಗಟ್ಟಿಯಾದಾಗ ಎಲ್ಲಾ ವಿಭಾಗದಲ್ಲೂ ಯಶಸ್ಸು ಸಾಧಿಸಬಹುದು ಎಂದರು. ವಿಭಾಗ ಸಹ ಪ್ರಭಾರಿ ಶ್ರೀ ಗೋಪಾಲಕೃಷ್ಣ ಹೇರಳೆಯವರು ಪ್ರಾಸ್ತಾವಿಕವಾಗಿ ಕಾರ್ಯಕರ್ತರ ಶ್ರಮದ ಫಲವಾಗಿ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಯೋಜನೆ ತಲುಪುತ್ತಿದೆ ಎಂದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಕನಸು ನನಸಾಗುತ್ತಿದೆ ಎಂದರ್ಥ. ಮುಂದಿನ ದಿನ ಬಿಜೆಪಿ ಇನ್ನಷ್ಟು ಬಲಗೊಳ್ಳಲಿದೆ ಎಂದರು.

ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್ ಸಿ ನಾರಾಯಣ ರವರು ಮಾತನಾಡಿ ಪುತ್ತೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯರು ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಬೇಕೆಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು ರಾಜ್ಯ ಮತ್ತು ಜಿಲ್ಲೆಯಿಂದ ಕೊಟ್ಟಿರುವ ಕಾರ್ಯಕ್ರಮಗಳನ್ನು ಕ್ಲಪ್ತ ಸಮಯದಲ್ಲಿ ಅನುಷ್ಠಾನ ಮಾಡಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಪ್ರತಿ ಗ್ರಾಮಕ್ಕೆ ಗ್ರಾಮ ಪ್ರತಿನಿಧಿಗಳ ಘೋಷಣೆ ಮಾಡಲಾಯಿತು.ವೇದಿಕೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಪ್ರಭಾರಿ ಮೀನಾಕ್ಷಿ ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೋಗಿ, ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

ಸಭೆಯಲ್ಲಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಗ್ರಾಮ ಪ್ರತಿನಿಧಿಗಳು, ಜಿಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಮಣಿಯಾಣಿ ಕಾರ್ಯಕ್ರಮ ನಿರೂಪಿಸಿ, ಪ್ರವೀಣ್ ಪ್ರಭು ದೇವಿನಗರ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.