HomePage_Banner
HomePage_Banner
HomePage_Banner

ನ.14ರಂದು ಪುತ್ತೂರಿನಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ -2020ಕ್ಕೆ ಸಿಗಲಿದೆ ಚಾಲನೆ

Puttur_Advt_NewsUnder_1
Puttur_Advt_NewsUnder_1
  • ಕೊರೋನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ, ಪಾತ್ರದ ವಿಚಾರಗೋಷ್ಠಿಯ ಮೂಲಕ ಸಪ್ತಾಹಕ್ಕೆ ಚಾಲನೆ
  • ಎಲ್ಲಾ ಸಹಕಾರಿ ಬ್ಯಾಂಕ್‌ಗಳಲ್ಲೂ ಜನರಿಕ್ ಔಷಧಿ
  • ಇಬ್ಬರು ಹಿರಿಯ ಸಹಕಾರಿಗಳಿಗೆ ಸನ್ಮಾನ


ಪುತ್ತೂರು: ಕೊರೋನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ, ಪಾತ್ರದ ವಿಚಾರಗೋಷ್ಠಿ ಮತ್ತು ಕೃಷಿಪತ್ತಿನ ಸಹಕಾರಿ ಸಂಘಗಳ ಮೂಲಕ ಜನರಿಕ್ ಔಷದಿಯ ಸೌಲಭ್ಯ ಸಿಗುವ ಘೋಷ ವಾಕ್ಯದೊಂದಿಗೆ 67ನೇ ಅಖಿಲ ಭಾರತ ಸಹಕಾರ ಸಪ್ತಾಹದವು ನ.14ರಂದು ಪುತ್ತೂರಿನ ಕೊಂಬೆಟ್ಟು ಎಮ್. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಪ್ರಾ.ಕೃ.ಪ.ಸ.ಸಂಘ, ದ.ಕ.ಜಿ.ಸ.ಯೂನಿಯನ್ ಮತ್ತು ದ.ಕ.ಜಿ.ಕೇ.ಸ ಬ್ಯಾಂಕ್‌ನಗಳ ಕೂಡುವಿಕೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರ ನೇತೃತ್ವದಲ್ಲಿ ನಡೆಯಲಿದೆ.

ಸುದ್ದಿಯೊಂದಿಗೆ ಮಾತನಾಡಿದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಎರಡು ಜಿಲ್ಲೆಗಳ ಕೂಡುವಿಕೆ ಮತ್ತು ಪುತ್ತೂರು ತಾಲೂಕಿನ ೧೯ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಅವರು ಸಹಕಾರ ಸಂಘಗಳ ಧ್ವಜಾರೋಹಣ ಮಾಡಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿರುವ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಪ್ತಾಹವನ್ನು ಉದ್ಘಾಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ಸಹಕಾರಿ ರಮೇಶ್ ಭಟ್ ಉಪ್ಪಂಗಳ ಅವರು ಕೊರೋನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರದ ಕುರಿತು ವಿಚಾರಗೋಷ್ಠಿ ನಡೆಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ ನಾಯಕ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ನಿರ್ದೇಶಕ ರಾಜಶೇಖರ್ ಜೈನ್, ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ, ಕೆಎಮ್‌ಎಫ್ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಪಿ.ಎಲ್.ಡಿ ಬ್ಯಾಂಕ್‌ನ ಅಧ್ಯಕ್ಷ ಭಾಸ್ಕರ್ ಗೌಡ ಇಚಿಲಂಪಾಡಿ, ಟಿಎಪಿಸಿಎಂಸಿ ಅಧ್ಯಕ್ಷ ಕೃಷ್ಣಕುಮಾರ್ ರೈ, ಸಹಕಾರಿ ಯೂನಿಯನ್ ಪುತ್ತೂರು ಅಧ್ಯಕ್ಷ ಪ್ರವೀಣ್ ರೈ ಮೇನಾಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದ ಅವರು ಕಾರ್ಯಕ್ರಮದಲ್ಲಿ ನಡೆದ ಸಮಗ್ರ ವರದಿಯನ್ನು ಜಿಲ್ಲಾ ಸಹಕಾರಿ ಮಂಡಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.

ಹಿರಿಯ ಸಹಕಾರಿಗಳಿಗೆ ಸನ್ಮಾನ:
ಸಹಕಾರ ಸಪ್ತಾಹದಲ್ಲಿ ಈ ಭಾರಿ ಇಬ್ಬರು ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಾಗುವುದು. ಹಿರಿಯ ಸಹಕಾರಿಗಳಾದ ಸೀತಾರಾಮ ರೈ ಸವಣೂರು, ಕರುಣಾಕರ ಗೋಗಟೆ ಅವರನ್ನು ಸಹಕಾರ ಪ್ತಾಹದ ಅಂಗವಾಗಿ ಸನ್ಮಾನಿಸಲಾಗುವುದು ಎಂದು ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರೀಕ್ಷಕ ಪೂವಪ್ಪ, ಪುತ್ತೂರು ಕೇಂದ್ರ ಸಹಕಾರಿ ಬ್ಯಾಂಕ್‌ನ ವ್ಯವಸ್ಥಾಪಕ ರತ್ನಕುಮಾರ್ ಉಪಸ್ಥಿತರಿದ್ದರು.

ಸಹಕಾರಿ ಬ್ಯಾಂಕನಲ್ಲೂ ಇನ್ಮುಂದೆ ಜನರಿಕ್ ಔಷಧಿ
ಕಡಿಮೆ ದರದಲ್ಲಿ ಜನರಿಗೆ ಔಷಧಿ ಸಿಗಬೇಕೆಂದು ಜನರಿಕ್ ಔಷಧಿ ವ್ಯವಸ್ಥೆ ಕಲ್ಪಿಸಿದ್ದು, ಸಹಕಾರ ಸಂಘಗಳ ಮೂಲಕ ರೈತನಿಗೂ ಕಡಿಮೆ ದರದಲ್ಲಿ ಔಷಧಿ ಸಿಗಬೇಕೆಂದು ಸಹಕಾರ ಮಾರಾಟ ಮಹಾಮಂಡಲ ಏಜೇನ್ಸಿ ಪಡೆದು ಕೊಂಡಿದೆ. ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದಗೌಡ ಅವರು ನ.೬ರಂದು ಬೆಂಗಳೂರಿನಲ್ಲಿ ಉದ್ಘಾಟಿಸಿದ್ದಾರೆ. ಇದೀಗ ಪುತ್ತೂರಿನಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ತಾಲೂಕಿನ ಸಹಕಾರಿ ಸಂಸ್ಥೆಗಳಲ್ಲಿ ಅಳವಡಿಸುವ ಕುರಿತು ಯೋಜನೆ ರೂಪಿಸಲಾಗುವುದು. ಮುಂದೆ ಎಲ್ಲಾ ಸಹಕಾರಿ ಬ್ಯಾಂಕ್‌ನಲ್ಲೂ ಜನರಿಕ್ ಔಷಧಿ ಲಭ್ಯವಾಗಲಿದ್ದು, ಕಟ್ಟಕಡೆಯ ವ್ಯಕ್ತಿಗೂ ಕಡಿಮೆ ದರದಲ್ಲಿ ಔಷಧಿ ಲಭ್ಯವಾಗಲಿದೆ.

ಶಶಿಕುಮಾರ್ ರೈ ಬಾಲ್ಯೊಟ್ಟು ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.