HomePage_Banner
HomePage_Banner
HomePage_Banner

ಮಂಗಳೂರಿನಿಂದ ಹುಬ್ಬಳ್ಳಿಗೆ ಮೃತದೇಹವನ್ನು ಸಾಗಿಸಲು ನೆರವು: ಮಾನವೀಯತೆ ಮೆರೆದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಂಗಳೂರು ದೇರಳಕಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಟ ಉತ್ತರ ಕನ್ನಡ ಮೂಲದ ವ್ಯಕ್ತಿಯೋರ್ವರ ಮೃತದೇಹವನ್ನು ಅವರ ಊರಿಗೆ ತಲುಪಿಸಲು ವ್ಯವಸ್ಥೆ ಮಾಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದ.ಕ ಜಿಲ್ಲಾ ಸಮಿತಿ ಮಾನವೀಯತೆ ಮೆರೆದಿದೆ.

 

ಹುಬ್ಬಳ್ಳಿ ಮೂಲದ ವಿಷ್ಣು ಎಂಬ ಯುವಕ ದೇರಳಕಟ್ಟೆ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಮೃತರ ಮೃತದೇಹವನ್ನು ಊರಿಗೆ ಸಾಗಿಸಲು ಹಣಕಾಸಿನ ಕೊರತೆಯಿಂದ ಕುಟುಂಬ ಕಂಗಾಲಾಗಿತ್ತು. ಈ ವಿಚಾರ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದ ಕ ಜಿಲ್ಲೆಯ ಮುಖಂಡರಾದ ಗಿರೀಶ್ ಶೇಟ್, ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಹಾಗೂ ಆಸಿಫ್ ಆಪತ್ಭಾಂದವ ಮೊದಲಾದವರು ಸೇರಿಕೊಂಡು ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಕೊಂಡೊಯ್ಯಲು ನೆರವಾದರು. ಇವರ ಈ ಮಾನವೀಯ ಸೇವೆ ಮೆಚ್ಚುಗೆಗೆ ಪಾತ್ರವಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದ.ಕ ಜಿಲ್ಲೆ ವತಿಯಿಂದ ಮಹಮ್ಮದ್ ಹಾಜಿ ಕುಕ್ಕುವಳ್ಳಿ ನೇತೃತ್ವದಲ್ಲಿ ಈಗಾಗಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಹಲವಾರು ಮನೆಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯವನ್ನು ನಡೆಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.