HomePage_Banner
HomePage_Banner
HomePage_Banner

ನ.14: ಪುಣ್ಚತ್ತಾರಿನಲ್ಲಿ ಪ್ರೋ ವಾಲಿಬಾಲ್ ಪಂದ್ಯಾಟ- ಸನ್ಮಾನ ಸಮಾರಂಭ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ 8ನೇ ವರ್ಷದ ಆಯ್ದ ಸ್ಥಳೀಯ ಆಟಗಾರರ ಪ್ರೋ ಮಾದರಿಯ ವಾಲಿಬಾಲ್ ಪಂದ್ಯಾಟ, ಸನ್ಮಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರವು ನ. 14ರಂದು ಪುಣ್ಚತ್ತಾರಿನಲ್ಲಿ ಜರುಗಲಿದೆ.

ಬೆಳಿಗ್ಗೆ ಕಾರ್ಯಕ್ರಮವನ್ನು ನಿವೃತ್ತ ಯುವಜನ ಸೇವಾ ಕ್ರೀಡಾಧಿಕಾರಿ ಬಿ.ಕೆ. ಮಾಧವ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪುಣ್ಚತ್ತಾರು ಶ್ರೀಹರಿ ಭಜನಾ ಮಂಡಳಿಯ ಗೌರವಾಧ್ಯಕ್ಷ ನಾರಾಯಣ ಗೌಡ ಇಡ್ಯಡ್ಕ ವಹಿಸಲಿದ್ದು, ಕರಿಮಜಲು-ಪೈಕ ಗ್ರಾಮ ದೈವಸ್ಥಾನದ ಅನುವಂಶಿಕ ಮೊಕ್ತೇಸರ ಪುಟ್ಟಣ್ಣ ಗೌಡ ಪೈಕ, ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಬಾಲಕೃಷ್ಣ ರೈ ಕುಂಡುಳಿ, ಪುಣ್ಚತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮಾಳ, ಶ್ರೀಹರಿ ಭಜನಾ ಮಂಡಳಿ ಪುಣ್ಚತ್ತಾರು ಇದರ ಅಧ್ಯಕ್ಷ ಸುಂದರ ನಾಯ್ಕ ಉಪ್ಪಡ್ಕ, ನಾವೂರು ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ್ ಕುಮಾರ್ ರೈ ಕುಂಡುಳಿ, ಪುಣ್ಚತ್ತಾರು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಧರ್ಮದರ್ಶಿ ವೆಂಕಟ್ರಮಣ ಆಚಾರ್ಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಾಣಿಯೂರು ಒಕ್ಕೂಟದ ಪುಣ್ಚತ್ತಾರಿನ ಅಧ್ಯಕ್ಷ ರವಿಶಂಕರ ಎನ್.ಟಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನ್ಯಾಯವಾದಿ ಮೋಹನ್ ಗೌಡ ಇಡ್ಯಡ್ಕ ವಹಿಸಲಿದ್ದಾರೆ. ಬೆಳ್ಳಾರೆ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ, ಮಂಗಳೂರು ತುಂಬೆ ಬಿ.ಎ. ಐಟಿಐಯ ಪ್ರಾಂಶುಪಾಲರಾದ ನವೀನ್ ಕುಮಾರ್ ಕೆ.ಎಸ್, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನಾವೂರು ಪುಣ್ಚತ್ಥಾರು ಸಾರ್ವಜನಿಕ ವರಮಹಾಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷ ರೇವತಿ ಮೂಡೈಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೆಳ್ಳಾರೆ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ, ಕಾಣಿಯೂರು ಆಶಾ ಕಾರ್ಯಕರ್ತೆಯವರಾದ ವಾರಿಜ ದೇವರಾಜ ಬೀಜತ್ತಡ್ಕ, ಕುಸುಮ ಧರ್ಮೇಂದ್ರ ಗೌಡ ಕಟ್ಟತ್ತಾರು ಇವರನ್ನು ಸನ್ಮಾನಿಸಲಾಗುವುದು.

2019-20ನೇ ಸಾಲಿನ 7ನೇ ತರಗತಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬೊಬ್ಬೆಕೇರಿ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸಿಂಚನ ಎಕ್ಕಡ್ಕ ಹಾಗೂ ೧೦ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಾಣಿಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಕಾಪೆಜಾಲು ಕುದ್ಮಾರು ಇವರಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಪುಣ್ಚತ್ತಾರು ಶ್ರೀ ಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಪದಾಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.