HomePage_Banner
HomePage_Banner
HomePage_Banner

ಬೀದಿ ಬದಿ ವ್ಯಾಪಾರಸ್ಥರಿಗೆ ಮಾಹಿತಿ ಕಾರ್ಯಾಗಾರ | ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತು ಚೀಟಿ- ರೂಪಾ ಶೆಟ್ಟಿ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಭಾರತ ಸರ್ಕಾರದ ವತಿಯಿಂದ ನಡೆಯುತ್ತಿರುವ ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಮಂತ್ರಾಲಯ ವತಿಯಿಂದ ನಡೆಯುತ್ತಿರುವ ಡೇ-ನಲ್ಮ್ ಯೋಜನೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ,ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪುತ್ತೂರು ನಗರಸಭೆ ವತಿಯಿಂದ ಬೀದಿ ವ್ಯಾಪಾರಿಗಳಿಗೆ ತರಬೇತಿ ಮತ್ತು ಆತ್ಮನಿರ್ಭರ್ ಸ್ವ-ನಿಧಿ ಮಾಹಿತಿ ಕಾರ್ಯಗಾರ ನ.೧೨ ರಂದು ಪುರಭವನದಲ್ಲಿ ನಡೆಯಿತು.

ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈಗಾಗಲೇ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ೯೨ ಮಂದಿಗೆ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ನೀಡಲಾಗಿದೆ. ಪ್ರಸ್ತುತ ೬೪ ಮಂದಿ ಬೀದಿ ಬೀದಿ ಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುವ ಪ್ರಕ್ರೀಯೆ ಹಿಂದೆ ಇತ್ತು ಆದರೆ ಇಂದು ಅದು ಬದಲಾಗಿ ಸರ್ಕಾರವೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ನಡೆಸಿ ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರೋತ್ಸಾಹ ನೀಡುವ ಕೆಲಸ ಆಗುತ್ತಿದೆ ಎಂದು ಹೇಳಿದರು.

ಸಂಚಾರಕ್ಕೆ ಅಡ್ಡಿಯಾಗದಂತೆ ವ್ಯವಹರಿಸಿ:
ಅತಿಥಿಯಾಗಿ ಭಾಗವಹಿಸಿದ್ದ ಸಂಚಾರ ಪೊಲೀಸ್ ಠಾಣೆಯ ಎಸ್.ಐ ರಾಮ ನಾಯ್ಕ ಅವರು ಮಾತನಾಡಿ ಬೀದಿ ಬದಿ ವ್ಯಾಪಾರ ನಡೆಸುವಾಗ ಸಂಚಾರಿ ನಿಯಮಗಳನ್ನು ಪಾಲಿಸಿ,ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆಯಾಗದಂತೆ ವ್ಯಾಪಾರ ನಡೆಸಿ ಎಂದು ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು ನಗರಸಭೆಯ ಪರಿಸರ ಅಭ್ಯಂತರ ಗುರುಪ್ರಸಾದ್ ಶೆಟ್ಟಿ ಹಾಗೂ ಆರ್ಥಿಕ ಸಲಹೆಗಾರ ಗೋಪಾಲಕೃಷ್ಣ ಭಟ್ ಅವರು ಬೀದಿ ಬದಿ ವ್ಯಾಪಾರಸ್ಥರಿಗೆ ಸರಕಾರದ ವತಿಯಿಂದ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯ ಅಭಿಯಾನ ವ್ಯವಸ್ಥಾಪಕಿ ವೆರಿನ್ ರೆಬೆಲ್ಲೋ ಮತ್ತಿತರರು ಉಪಸ್ಥಿತರಿದ್ದರು. ಜಯುಲಕ್ಷ್ಮೀ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.