HomePage_Banner
HomePage_Banner
HomePage_Banner

ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್, ಸಂಚಾರಿ ಪೊಲೀಸ್ ಠಾಣೆ ಹಾಗೂ ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇವುಗಳ ಸಹಯೋಗದೊಂದಿಗೆ ಸಂಚಾರಿ ನಿಯಮಗಳ‌ ಜಾಗೃತಿ ಕಾರ್ಯಕ್ರಮವು ನ.13ರಂದು ಬಸ್ ನಿಲ್ದಾಣದ ಬಳಿಯ ಗಾಂಧಿ ಕಟ್ಟೆ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಚಾರಿ ಸುರಕ್ಷತೆಯ ಮಾಹಿತಿ ಒಳಗೊಂಡ ಕರಪತ್ರವನ್ನು ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್‌ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ಸಮಸ್ಯೆಗಳು ಹೆಚ್ಚಾಗುತ್ತಿದೆ. ಸಂಚಾರ ನಿಯಂತ್ರಣ ಮುಂದಿನ ದಿನಗಳಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಲಿದೆ. ಇದಕ್ಕಾಗಿ ನಗರ ಸಭೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿಕೊಂಡು ಕಾರ್ಯನಿರ್ವಹಿಸಲಿದೆ. ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಿಕೊಂಡು ಅಪಘಾತವನ್ನು‌ ನಿಯಂತ್ರಿಸಬೇಕು. ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕಾರ್ಯ ಎಂದು ಅವರು ಹೇಳಿದರು.

ಸಂಚಾರಿ ಠಾಣಾ ಉಪನಿರೀಕ್ಷಕ ರಾಮ ನಾಯ್ಕ್ ಮಾತನಾಡಿ, ಪುತ್ತೂರಿನಲ್ಲಿ ಪ್ರತಿವರ್ಷ 25ರಿಂದ 30 ಮಂದಿ ವಾಹನ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಸಂಚಾರಿ ನಿಯಮಗಳಿರುವುದು ನಮ್ಮ‌ ಜೀವ ರಕ್ಷಣೆಗಾಗಿರುವು. ವಾಹನ ಅಪಘಾತ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೀಡುವ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು.

ನಗರ ಸಭಾ ಉಪಾಧ್ಯಕ್ಷೆ ವಿದ್ಯಾಗೌರಿ, ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಶ್ರೀಧರ ರೈ ಹಾಗೂ ಅಧ್ಯಕ್ಷತೆ ವಹಿಸಿದ್ದ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸೀಮಾ‌ನಾಗರಾಜ್ ಸಂದರ್ಭೋಚಿತವಾಗಿ ಮಾತನಾಡಿದರು.

ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸೀಮಾ‌ನಾಗರಾಜ್ ಸ್ವಾಗತಿಸಿದರು.ಸಂಚಾರಿ ಠಾಣಾ ಸಿಬಂದಿ ಚಂದ್ರಶೇಖರ , ಲೌಲಿ ಸೂರಜ್ ನಾಯರ್, ಗೈಡ್ ಶಿಕ್ಷಕಿ ಹರಿಣಾಕ್ಷಿ, ಉಪಾಧ್ಯಕ್ಷ ವೀಣಾ ಬಿ.ಕೆ, ಅನುರಾದ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ತಾಲೂಕಿನ ನಾಲ್ಕು ಶಾಲೆಗಳ ಸ್ಕೌಟ್ಸ್, ಗೈಡ್ಸ್ & ಸ್ಥಳೀಯ ಸಂಸ್ಥೆಗಳ‌ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.