HomePage_Banner
HomePage_Banner
HomePage_Banner

ಪುತ್ತೂರು-ಉಪ್ಪಿನಂಗಡಿ ಚತುಷ್ಟಥ ಕಾಮಗಾರಿ ಭೂ ಸ್ವಾಧೀನ ಗೊಂದಲ ಶೀಘ್ರದಲ್ಲೇ ನಿವಾರಣೆ- ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು -ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿ ಸಂಬಂಧಿಸಿದಂತೆ ಜಮೀನು ಸ್ವಾಧೀನದ ವಿಚಾರದಲ್ಲಿ ಗೊಂದಲವಿದ್ದು ಶೀಘ್ರದಲ್ಲೇ ಎಲ್ಲಾ ಸಮಸ್ಯೆಗ:ಳನ್ನು ನಿವಾರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.

ನ.13ರಂದು ಪುತ್ತೂರಿಗೆ ಆಗಮಿಸಿ ಮಿನಿವಿಧಾನಸೌಧದಲ್ಲಿರುವ ಸಹಾಯಕ ಆಯುಕ್ತ ಕಚೇರಿಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂದಿಸಿದ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಅಗಲಿಕರಣ ಕಾಮಗಾರಿ ನಡೆಯುತ್ತಿದ್ದು, ಇದೇ ರಸ್ತೆಯ ಪಕ್ಕದಲ್ಲಿ ಪುತ್ತೂರು ನಗರಕ್ಕೆ ಜಲಸಿರಿ ಯೋಜನೆಯಡಿ ಕುಡಿಯುವ ನೀರಿನ ಸರಬರಾಜು ಪೈಪ್‌ಲೈನ್ ಹಾದು ಹೋಗಿದೆ. ಇದಕ್ಕೆ ಸಂಬಂಧಿಸಿದಂತೆ ೩೫ ಸೆಂಟ್ಸ್ ಜಮೀನು ಭೂಸ್ವಾಧೀನದ ವಿಚಾರದಲ್ಲಿ ಗೊಂದಲವಿದೆ. ಇದೇ ರೀತಿ ಕೊಳ್ತಿಗೆ ಗ್ರಾಮದಲ್ಲೂ ೨೫ ಸೆಂಟ್ಸ್ ಭೂ ಸ್ವಾಧೀನ ವಿಚಾರದಲ್ಲಿ ಅಸ್ಪಷ್ಟತೆ ಇದೆ. ದರಪಟ್ಟಿ ನಿಗದಿ ಕುರಿತು ಚರ್ಚಿಸಲು ಸಭೆ ನಡೆಸಲಾಗಿದೆ. ಈ ವೇಳೆ ರೈತ ಮುಖಂಡರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಶೀಘ್ರದಲ್ಲೇ ಎಲ್ಲ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದಮನಿತ ಸಮುದಾಯಕ್ಕೆ ನೀಡಲೆಂದು ಬ್ರಿಟಿಷ್ ಆಡಳಿತದ ಕಾಲದಲ್ಲಿ ಡಿ.ಸಿ. ಮನ್ನಾ ಭೂಮಿ ಯೋಜನೆ ಜಾರಿಗೆ ತರಲಾಗಿತ್ತು. ಈ ಭೂಮಿಯನ್ನು ಪರಿಶಿಷ್ಟ ಸಮುದಾಯವು ಸೇರಿದಂತೆ ದಮನಿತ ಸಮುದಾಯಕ್ಕೆ ವಿತರಿಸುವ ಕಾರ್ಯ ಇನ್ನೂ ಕೂಡ ಆಗಿಲ್ಲ. ಅನೇಕ ಕಡೆ ಇವುಗಳನ್ನು ಅತಿಕ್ರಮಣ ಮಾಡಲಾದ ದೂರುಗಳೂ ಇವೆ. ಈ ಬಗ್ಗೆ ಗ್ರಾಮ ಮಟ್ಟದಿಂದಲೇ ಸಮಗ್ರ ಅಧ್ಯಯನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮನವಿ ಬಂದಿಲ್ಲ:
ಕಂಬಳ ವಿಚಾರದಲ್ಲಿ ಯಾರಿಂದಲೂ ಮನವಿ ಬಂದಿಲ್ಲ. ಮನವಿ ಬಂದ ಬಳಿಕ ಸರಕಾರದ ಮಾರ್ಗದರ್ಶಿ ಸೂತ್ರ ಮುಂದಿಟ್ಟುಕೊಂಡು ಅದರಂತೆ ನಿರ್ಧಾರ ಕೈಗೊಳ್ಳಲಾಗುವುದು. ವನ್-ಧನ್ ಯೋಜನೆಯ ಅಡಿಯಲ್ಲಿ ಕಾಡುತ್ಪತ್ತಿ ಉತ್ಪನ್ನಗಳ ಮಾರಾಟ ಮಾಡುವವರಿಗಾಗಿ ಚಾರ್ಮಾಡಿ ಮತ್ತು ಸುಬ್ರಹ್ಮಣ್ಯದಲ್ಲಿ ಮಾರುಕಟ್ಟೆ ಪ್ರಾಂಗಣ ನಿರ್ಮಿಸಲು ಉದ್ದೇಶಿಸಲಾಗಿದೆ. ತಲಾ ರೂ.15 ಲಕ್ಷದಂತೆ ರೂ.೩೦ ಲಕ್ಷ ರೂ.ಅನುದಾನ ಇದ್ದು, ಈ ಬಗ್ಗೆ ಲ್ಯಾಂಪ್ಸ್ ಸೊಸೈಟಿ ಜತೆ ಸಮಾಲೋಚನೆ ನಡೆಸಲಾಗಿದೆ. ಕಂಬಳಕ್ಕೆ ಅನುಮತಿ ನೀಡುವ ಬಗ್ಗೆ ಈ ತನಕ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು. ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಪೌರಯುಕ್ತೆ ರೂಪಾ ಶೆಟ್ಟಿ ಉಪಸ್ಥಿತರಿದ್ದರು.

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಬೆಳ್ಳಿಪ್ಪಾಡಿ ಗ್ರಾಮದ ಪಾದೆಕಲ್ಲು ಹಕ್ಕುಪತ್ರ ಸಮಸ್ಯೆ ಹಾಗೂ ಡೆಕ್ಕಾಜೆ-ಪರನೀರು ರಸ್ತೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು ಸ್ಥಳ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ರೈತ ಸಂಘದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪಾದೆಕಲ್ಲು, ಇಬ್ರಾಹಿಂ ಖಲೀಲ್ ಪುಚ್ಚೆತ್ತಡ್ಕ, ಕೋಡಿಂಬಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ನ್ಯಾಯವಾದಿ ಕುಮಾರ ನಾಥ್, ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.

ಸರಕಾರದ ಸೂಚನೆಯಂತೆ ಪದವಿ ಕಾಲೇಜು ತರಗತಿಗಳು ನ.17ರಿಂದ ಪ್ರಾರಂಭಗೊಳ್ಳಲಿವೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ ಸೇರಿದಂತೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.
-ಡಾ.ರಾಜೇಂದ್ರ ಕೆ.ವಿ ಜಿಲ್ಲಾಧಿಕಾರಿ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.