HomePage_Banner
HomePage_Banner
HomePage_Banner

67ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಚಾರ್ವಾಕ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ೬೭ನೇ ಅಖಿಲ ಭಾರತ ಸಹಕಾರ ಸಪ್ತಾಹ ೨೦೨೦ ಇದರ ಅಂಗವಾಗಿ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವು ಪುತ್ತೂರು ಬಂಟರ ಭವನದಲ್ಲಿ ನ ೧೪ರಂದು ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹಾಗೂ ವಿವಿಧ ಗಣ್ಯವ್ಯಕ್ತಿಗಳ ಉಪಸ್ಥಿತಿಯಲ್ಲಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಹಾಗೂ ಸಂಘದ ಉಪಾಧ್ಯಕ್ಷ ಮುರಳೀಧರ ಪುಣ್ಚತ್ತಾರು ಇವರಿಗೆ ಸ್ಮರಣಿಕೆ ನೀಡಿ, ಶಾಲು ಹೊದಿಸಿ ಗೌರವಿಸಲಾಯಿತು. ಸತತ ೫ ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿರುವ ಚಾರ್ವಾಕ ಪ್ರಾ.ಕೃ.ಪ.ಸ.ಸಂಘವು ೨೦೧೯-೨೦ನೇ ಸಾಲಿನಲ್ಲಿ ಕೊರೋನಾ ಮಹಾಮಾರಿಯ ಸಂಕಷ್ಟ ಸಮಯದಲ್ಲಿಯೂ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಸಹಕಾರ ಸಂಘಗಳ ಪೈಕಿ ಶೇಕಡಾ ೧೦೦ ಸಾಲ ಮರುಪಾವತಿಯಾದ ಏಕೈಕ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಈ ಸನ್ಮಾನಕ್ಕೆ ಭಾಜನವಾಯಿತು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ವಿಶ್ವನಾಥ ಕೂಡಿಗೆ, ರಮೇಶ್ ಉಪ್ಪಡ್ಕ, ಕಮಲ ಮುದುವ, ಸಿಬ್ಬಂದಿಗಳಾದ ವಾಣಿ, ವಸಂತಿ, ಭವತ್, ವಿನಯ್, ಪುನೀತ್, ವೇಣುಗೋಪಾಲ ಹಾಗೂ ಸವಿತಾರವರು ಉಪಸ್ಥಿತರಿದ್ದರು.

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೨೦೧೯-೨೦ನೇ ಸಾಲಿನಲ್ಲಿ ಕೊರೋನಾ ಮಹಾಮಾರಿಯ ಸಂಕಷ್ಟ ಸಮಯದಲ್ಲಿಯೂ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಸಹಕಾರ ಸಂಘಗಳ ಪೈಕಿ ಶೇಕಡಾ ೧೦೦ ಸಾಲ ಮರುಪಾವತಿಯಾದ ಏಕೈಕ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಈ ಸನ್ಮಾನಕ್ಕೆ ಭಾಜನವಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.