HomePage_Banner
HomePage_Banner
HomePage_Banner

ದ.ಕ‌ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಗೆ ‘ಸಹಕಾರಿ ರತ್ನ’ ಪ್ರಶಸ್ತಿ ಪ್ರದಾನ

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಸಹಕಾರಿ ದುರೀಣ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ರವರಿಗೆ ಬೆಂಗಳೂರಿನಲ್ಲಿ ನ.14ರಂದು ನಡೆದ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ‘ಸಹಕಾರಿ ರತ್ನ ಪ್ರಶಸ್ತಿ ಪ್ರಧಾನ ಮಾಡಿದರು.

ವೆಂಕಟರಮಣ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಕೆ.ಟಿ., ಜೇನು ವ್ಯವಸಾಯಗಾರರ ಸಹಕಾರ ಸಂಘದ ವ್ಯವಸ್ಥಾಪನಾ ನಿರ್ದೇಶಕ ತಿಮ್ಮಯ್ಯ ಪಿಂಡಿಮನೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೋಲ್ದಾರ್ ನಿವಾಸಿಯಾಗಿರುವ ಚಂದ್ರ ಕೋಲ್ಚಾರ್‌ ವಾಣಿಜ್ಯ ಪದವೀಧರರಾಗಿರುತ್ತಾರೆ, ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಐವರ್ನಾಡು ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 8 ವರ್ಷ ಅಧ್ಯಕ್ಷ, 15 ವರ್ಷ ನಿರ್ದೇಶಕ, ದ.ಕ ಸಹಕಾರಿ ಮಾರಾಟ ಸಂಘ ಮಂಗಳೂರು ಇದರಲ್ಲಿ 10 ವರ್ಷ ನಿರ್ದೇಶಕ, ಐವರ್ನಾಡು ರಬ್ಬರ್ ಉತ್ಪಾದಕರ ಸಂಘದ ಸ್ಥಾಪಕ ಅಧ್ಯಕ್ಷ, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ 5 ವರ್ಷ ನಿರ್ದೇಶಕ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷನಾಗಿ ಸೇವೆ ಸಲ್ಲಿಸಿರುತ್ತಾರೆ.

ಇವರ ಅವಧಿಯಲ್ಲಿ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ 2019ರಲ್ಲಿ ‘ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ’, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಕಳೆದ ಮೂರು ವರ್ಷಗಳಿಂದ ಸತತ ‘ಅತ್ಯುತ್ತಮ ಸಹಕಾರಿ ಸಂಘ’ ಪ್ರಶಸ್ತಿ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷನಾಗಿ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಸತತ ಮೂರು ಬಾರಿ ‘ರಾಜ್ಯ ಪ್ರಶಸ್ತಿ’, ಒಂದು ಬಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ *ಉತ್ತಮ ಸಹಕಾರಿ ಸಂಘ ಪ್ರಶಸ್ತಿ, 2016ರಲ್ಲಿ ಧಾರವಾಡದಲ್ಲಿ ನಡೆದ 63ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ರಾಜ್ಯದ ಉತ್ತಮ ಸಹಕಾರಿ ಪ್ರಶಸ್ತಿ’, ಶ್ರೀಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ಬೆಂಗಳೂರು ಇದರಿಂದ ‘ಸಮಾಜ ರತ್ನ ರಾಷ್ಟ್ರೀಯ ಪುರಸ್ಕಾರ’ಗಳು ಇವರಿಗೆ ಲಭಿಸಿವೆ. ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷನಾಗಿ ಸಂಘವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದು ಸಹಕಾರಿ ಸಂಘಕ್ಕೆ ಸುಸಜ್ಜಿತವಾದ ಅಂದ ವಿಸೃತ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.