HomePage_Banner
HomePage_Banner

ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆ ಸ್ಥಳಾಂತರ-ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ನೆಲ್ಯಾಡಿಯ ಬೆಥಲ್ ಕಾಂಪ್ಲೆಕ್ಸ್‌ನಲ್ಲಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಶಾಖೆಯು ನ.30ರಂದು ಡೆಂಜ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಳ್ಳಲಿದ್ದು ಈ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಸಮಾಲೋಚನಾ ಸಭೆ ನ.೧೪ರಂದು ನೆಲ್ಯಾಡಿಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿಯವರು ಕಾರ್ಯಕ್ರಮದ ಕುರಿತಂತೆ ಮಾಹಿತಿ ನೀಡಿದರು. ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರೂ, ನೆಲ್ಯಾಡಿ ಶಾಖಾ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ನಾಗೇಶ್ ಗೌಡ ನಳಿಯಾರು, ನಿರ್ದೇಶಕರುಗಳಾದ ವೆಂಕಟ್ರಮಣ ಗೌಡ ಕರೆಂಕಿ, ಜಿನ್ನಪ್ಪ ಗೌಡ ಮುಳುವೇಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ., ನೆಲ್ಯಾಡಿ ಶಾಖಾ ವ್ಯವಸ್ಥಾಪಕ ಶಿವಪ್ರಸಾದ್, ನೆಲ್ಯಾಡಿ ಶಾಖಾ ಸಲಹಾ ಸಮಿತಿ ಸದಸ್ಯರುಗಳಾದ ಚಂದ್ರಶೇಖರ ಗೌಡ ಬ್ರಂತೋಡು, ರಾಧಾಕೃಷ್ಣ ಕೆರ್ನಡ್ಕ, ಸುಂದರ ಗೌಡ ಅತ್ರಿಜಾಲು, ನೋಣಯ್ಯ ಗೌಡ ಡೆಬ್ಬೇಲಿ, ಪುರಂದರ ಗೌಡ ಕಡೀರ, ಡೊಂಬಯ್ಯ ಗೌಡ ಶಿರಾಡಿ, ತುಕ್ರಪ್ಪ ಗೌಡ ಗೋಳಿತ್ತೊಟ್ಟು, ಸಿಬ್ಬಂದಿಗಳಾದ ಅಜಿತ್ ಕುಮಾರ್, ಹರೀಶ್ ಪೈ ಮತ್ತಿತರರು ಉಪಸ್ಥಿತರಿದ್ದರು. ಶಿವಪ್ರಸಾದ್ ಸ್ವಾಗತಿಸಿ, ನಾಗೇಶ್ ನಳಿಯಾರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.