HomePage_Banner
HomePage_Banner
HomePage_Banner

ಜನರ ಪ್ರೀತಿ ವಿಶ್ವಾಸದೊಂದಿಗೆ ಜವಾಬ್ದಾರಿಯುತ ಸ್ಥಾನ ನಿರ್ವಹಿಸುವೆ ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಅಭಿನಂದನೆಯಲ್ಲಿ ಜೀವಂಧರ್ ಜೈನ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜನರ ಪ್ರೀತಿ ವಿಶ್ವಾಸದೊಂದಿಗೆ ಜವಾಬ್ದಾರಿಯುತ ಸ್ಥಾನ ನಿರ್ವಹಿಸುವೆ ಎಂದು ನಗರಸಭೆ ನೂತನ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಹೇಳಿದರು.

ಅವರು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನ.14ರಂದು ಸಂಜೆ ಸ್ಥಳೀಯ ಮೂರು ವಾರ್ಡ್ ಹಾಗೂ ಸ್ಥಳೀಯರ ವತಿಯಿಂದ ನಗರಸಭಾ ನೂತನ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ ಅವರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿಂದನೆ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷ ನಮ್ಮಲ್ಲಿ ವಿಶ್ವಾಸವನ್ನಿಟ್ಟು ನಮಗೆ ನಗರಸಭೆ ಸಾರಥ್ಯವನ್ನು ನೀಡಿದೆ. ಯಾವುದೇ ಕಾರ್ಯಕರ್ತನಿಗೆ ನೋವಾಗದ ರೀತಿಯಲ್ಲಿ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಏನು ನಾವು ಭರವಸೆ ನೀಡಿದ್ದೇವೆ ಅದನ್ನು ಈಡೇರಿಸುವ ಮೂಲಕ ಸ್ವಚ್ಛ ಸುಂದರ ನಗರವನ್ನು ನಿರ್ಮಿಸುವಲ್ಲಿ ಪ್ರಯತ್ನಿಸುತ್ತೇವೆ, ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದರು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್.ಗೌರಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಕಾರ್ಯದರ್ಶಿಗಳಾದ ಯುವರಾಜ್, ಜಯಶ್ರೀ ಎಸ್ ಶೆಟ್ಟಿ, ಕೆಮ್ಮಿಂಜೆ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೇ.ಮೂ.ಸುಬ್ರಹ್ಮಣ್ಯ ಬಳ್ಳಕ್ಕುರಾಯ ಉಪಸ್ಥಿತರಿದ್ದರು. ನಗರಸಭಾ ಸದಸ್ಯೆ ಮಮತಾ ರಂಜನ್ ಸ್ವಾಗತಿಸಿದರು. ಸದಸ್ಯ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.