HomePage_Banner
HomePage_Banner
HomePage_Banner

ಕೆದಿಲ: ಬಟ್ಟೆ ಮಳಿಗೆ ಕೆಲಸಕ್ಕೆ ಹೋಗುತ್ತಿದ್ದ ಅಪ್ರಾಪ್ತೆ ನಾಪತ್ತೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಉಪ್ಪಿನಂಗಡಿಯ ಬಟ್ಟೆ ಮಳಿಗೆಗೆ ಕೆಲಸಕ್ಕೆ ಹೋಗುತ್ತಿದ್ದ ಕೆದಿಲ ಪೇರಮೊಗ್ರುವಿನ ಅಪ್ರಾಪ್ತೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆದಿಲ ಪೇರಮೊಗ್ರು ಗಾಂಧಿನಗರ ನಿವಾಸಿಯಾಗಿರುವ ಅಪ್ರಾಪ್ತೆಯೊಬ್ಬರು ಉಪ್ಪಿನಂಗಡಿಯಲ್ಲಿ ಬಟ್ಟೆ ಮಳಿಗೆಗೆ ಕೆಲಸಕ್ಕೆ ಹೋಗುತ್ತಿದ್ದು, ನ.14ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ಗೆಳತಿಯ ಅಕ್ಕನ ಮಗು ಅನಾರೋಗ್ಯದಿಂದಿದ್ದು ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ನಾನು ಆಸ್ಪತ್ರೆಯಲ್ಲೇ ಅವರ ಜೊತೆ ಇದ್ದು, ನಾಳೆ ಬರುತ್ತೇನೆಂದು ತಂದೆಗೆ ಕರೆ ಮಾಡಿ ಹೇಳಿದವರು. ಮಾರನೆ ದಿನವೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಅಪ್ರಾಪ್ತೆಯ ತಂದೆ ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಪುತ್ರಿ ಅಪ್ರಾಪ್ತೆಯಾಗಿದ್ದರಿಂದ ಆಕೆಯನ್ನು ಯಾರಾದರೂ ಬಲವಂತವಾಗಿ ಕರೆದು ಕೊಂಡುಹೋಗಿರುವ ಸಾಧ್ಯತೆ ಇದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.