HomePage_Banner
HomePage_Banner
HomePage_Banner

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಗೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು 2019-20ನೇ ಸಾಲಿನಲ್ಲಿ ಸಾಧಿಸಿದ ಸರ್ವಾಂಗೀಣ ಸಾಧನೆಯನ್ನು ಪರಿಗಣಿಸಿ ನ.15ರಂದು ಮಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯಲ್ಲಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ. ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ರವರೊಡಗೂಡಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಲೋಕಸಭಾ ಸಂಸದರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್‌ರವರು ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈ ಹಾಗೂ ಪ್ರಭಾರ ಮಹಾಪ್ರಬಂಧಕರಾದ ಶ್ರೀ ಗಣೇಶ್ ಜಿ. ಕೆ. ಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಶಾಸಕರಾದ  ವೇದವ್ಯಾಸ ಡಿ. ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ನಿರ್ದೇಶಕರಾದ ಶ್ರೀ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಶ್ರೀ ಕುಂಬ್ರ ದಯಾಕರ್ ಆಳ್ವ ಹಾಗೂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.