HomePage_Banner
HomePage_Banner
HomePage_Banner

ಕೌಕ್ರಾಡಿ: ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ವಿರೋಧ ಪ್ರತಿಭಟನೆ, ಯೋಜನೆ ಕೈ ಬಿಡುವಂತೆ ಮನವಿ

Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಕೌಕ್ರಾಡಿ ಹಾಗೂ ಇಚ್ಲಂಪಾಡಿ ಗ್ರಾಮವನ್ನು ಕೈಬಿಡಬೇಕೆಂದು ಒತ್ತಾಯಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಕೌಕ್ರಾಡಿ ಗ್ರಾ.ಪಂ.ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯತ್ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮ ಪಂಚಾಯತ್ ಕಚೇರಿ ಮುಂದೆ ಜಮಾಯಿಸಿದ ಗ್ರಾಮಸ್ಥರು ಕಸ್ತೂರಿ ರಂಗನ್ ವರದಿ ವಿರೋಧಿಸಿ ಧಿಕ್ಕಾರ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್‌ರವರು, ಕಸ್ತೂರಿ ರಂಗನ್ ವರದಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಕಡಬ,ಬೆಳ್ತಂಗಡಿ ತಾಲೂಕಿನ ೪೬ ಗ್ರಾಮಗಳು ಪಶ್ಚಿಮ ಘಟ್ಟ ಅತಿ ಸೂಕ್ಷ್ಮ ಪರಿಸರ ಪ್ರದೇಶ ಎಂದು ಗುರುತಿಸಲ್ಪಟ್ಟಿದೆ. ಈ ಯೋಜನೆ ಜಾರಿಗೊಂಡಲ್ಲಿ ಕೃಷಿಯನ್ನೇ ಕುಲಕಸುಬಾಗಿ ಜೀವನ ನಡೆಸುತ್ತಿರುವ ಕೃಷಿ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ನಿರ್ಗತಿಕರಾಗಲಿದ್ದಾರೆ. ಆದ್ದರಿಂದ ಯೋಜನೆ ವಿರೋಧಿಸಿ ಪಂಚಾಯತ್ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಿದ ಪರಿಣಾಮ ೨೦೧೫ರಲ್ಲಿ ಸರಕಾರದ ಆದೇಶದಂತೆ ವಿಶೇಷ ಗ್ರಾಮಸಭೆ ನಡೆದಿದ್ದು ಈ ಸಭೆಯಲ್ಲಿ ಯೋಜನೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೂ ಇದೀಗ ಯೋಜನೆ ಜಾರಿಗೊಳಿಸಲು ಸರಕಾರ ಮುಂದಾಗಿದೆ. ಇದು ನಮ್ಮ ಅಳಿವು ಉಳಿವಿ ಪ್ರಶ್ನೆಯಾಗಿದ್ದು ಇದರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕಿದೆ. ನ.೨೪ರಂದು ಕಡಬದಲ್ಲಿ ನಡೆಯುವ ರ್‍ಯಾಲಿ, ಪ್ರತಿಭಟನೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕಡಬ ತಾಲೂಕು ಸಂಚಾಲಕ ಧನಂಜಯ ಕೊಡಂಗೆ ಮಾತನಾಡಿ, ಕಡಬ ತಾಲೂಕಿನ ೮ ಗ್ರಾಮ ಪಂಚಾಯತ್‌ಗಳು ಈ ಯೋಜನೆಯ ವ್ಯಾಪ್ತಿಗೆ ಬರುತ್ತದೆ. ಪ್ರತಿ ಗ್ರಾಮ ಪಂಚಾಯತ್‌ಗಳ ಮೂಲಕ ಯೋಜನೆ ವಿರೋಧಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗುತ್ತಿದೆ. ನ.೨೪ರಂದು ಕಡಬ ತಾಲೂಕಿನ ಗ್ರಾಮಗಳ ಗ್ರಾಮಸ್ಥರಿಂದ ಕಡಬ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಹೋರಾಟಕ್ಕೆ ಹಲವು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ. ಇದೊಂದು ರಾಜಕೀಯ ರಹಿತ ಹೋರಾಟ ಆಗಿದೆ ಎಂದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕೌಕ್ರಾಡಿ ಇದರ ಸಂಚಾಲಕ ದೇವಪ್ಪ ಗೌಡ ಮನವಿ ವಾಚಿಸಿದರು. ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯ ರವಿಪ್ರಸಾದ್ ಗುತ್ತಿನಮನೆ, ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ರವಿಪ್ರಸಾದ್ ಶೆಟ್ಟಿ ರಾಮನಗರ, ಸ್ಥಳೀಯ ಮುಖಂಡರಾದ ಉದಯಕುಮಾರ್ ದೋಂತಿಲ, ಪ್ರವೀಣ್ ಕಟ್ಟೆಮಜಲು, ವಸಂತ ಕಟ್ಟೆಮಜಲು, ನಾಗೇಶ್ ನಳಿಯಾರು, ಅಬ್ದುಲ್ ಗಫಾರ್ ಜಮಾಲಿಯಾ, ಇಬ್ರಾಹಿಂ ಖಲೀಲ್, ಮೊಹಮ್ಮದ್ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.