HomePage_Banner
HomePage_Banner
HomePage_Banner

ಸಿಎಫ್‌ಐಯಿಂದ ಸ್ಕಾಲರ್ ಶಿಪ್ ಕೊಡಿ ವಿದ್ಯಾರ್ಥಿ ಆಂದೋಲನ ಸಿದ್ಧತೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸ್ಕಾಲರ್‌ಶಿಪ್ ಮಂಜೂರಾತಿಯಲ್ಲಿ ವಿಳಂಬ ಮತ್ತು ಅವ್ಯವಸ್ಥೆ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಪಿ.ಹೆಚ್.ಡಿ, ಎಮ್ ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ವಿರುದ್ಧ ಸ್ಕಾಲರ್ ಶಿಪ್ ಕೊಡಿ ವಿದ್ಯಾರ್ಥಿ ಆಂದೋಲನ ನಡೆಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿದ್ದತೆ ನಡೆಸಿದೆ ಕ್ಯಾಂಪಸ್ ಪ್ರಂಟ್ ಆಫ್ ಜಿಲ್ಲಾ ಸಮಿತಿ ಸದಸ್ಯ ಸವಾದ್ ಕಲ್ಲರ್ಪೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ಇನ್ನೇನು ಆರಂಭಗೊಳ್ಳಲಿದೆ ಕೊರೋನಾದ ಪರಿಣಾಮದಿಂದ ಜನರ ಆರ್ಥಿಕ ಸ್ಥಿತಿಗತಿಯು ತೀರಾ ಹದಗೆಟ್ಟಿರುವುದರಿಂದ ಪೋಷಕರು ತಮ್ಮ ಮಕ್ಕಳ ಅಡ್ಮಿಶನ್ ಫೀಸ್ ಕಟ್ಟಲು ಪರದಾಡುತ್ತಿದ್ದಾರೆ. ಈ ನಡುವೆ ಶಿಕ್ಷಣ ಸಂಸ್ಥೆಗಳು ಕೂಡಾ ಅಡ್ಮಿಶನ್ ಫೀಸ್ ಹೆಚ್ಚಿಸಿರುವುದಲ್ಲದೆ ಒಂದೇ ಕಂತಿನಲ್ಲಿ ಎಲ್ಲಾ ಶುಲ್ಕವನ್ನು ಕಟ್ಟಲು ಒತ್ತಾಯಿಸುವ ಮೂಲಕ ಪೋಷಕರಿಗೆ ಗಾಯದ ಮೇಲೆ ಬರೆ ಎಳೆದಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸ್ಕಾಲರ್‌ಶಿಪ್‌ಗೆ ಅವಲಂಬಿತರಾಗಿದ್ದಾರೆ. ಆದರೆ ಸ್ಕಾಲರ್‌ಶಿಪ್‌ನಲ್ಲಿ ಉಂಟಾಗಿರುವ ಅವ್ಯವಸ್ಥೆಯಿಂದ ರಾಜ್ಯದ ಹಲವು ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಪ್ರತಿ ಬಾರಿ ಸರಕಾರ ಮತ್ತು ಅಲ್ಪಸಂಖ್ಯಾತ ಇಲಾಖೆಯ ಸ್ಕಾಲರ್‌ಶಿಪ್ ವಿಚಾರದಲ್ಲಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರುವುದದಲ್ಲಿ ವಿಫಲವಾಗಿದೆ ಎಂದ ಅವರು ಸ್ಕಾಲರ್‌ಶಿಪ್ ವ್ಯವಸ್ಥೆಯನ್ನು ಸರಳೀಕರಣಗೊಳಿಸಬೇಕು. ಬಾಕಿ ಇರುವ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಬೇಕು, ಮಂಜೂರಾಗದೆ ಬಾಕಿಯಿರುವ ಎಲ್ಲಾ ಮಾದರಿಯ ವಿದ್ಯಾರ್ಥಿವೇತನವನ್ನು ಶೀಘ್ರ ಬಿಡುಗಡೆಗೊಳಿಸಬೇಕು. ಕಡಿತಗೊಳಿಸಿರುವ ಪಿ.ಹೆಚ್.ಡಿ, ಫೊಲೋಶಿಪ್ ಆದೇಶವನ್ನು ಹಿಂಪಡೆಯಬೇಕು. ದುರುಪಯೋಗವಾಗುತ್ತಿರುವ ವಿದ್ಯಾರ್ಥಿ ವೇತನದ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿ ಶೀಘ್ರವಾಗಿ ರಾಜ್ಯಾದ್ಯಂತ ಆಂದೋಲನ ನಡೆಯಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಪುತ್ತೂರು ಜಿಲ್ಲೆಯ ಅಧ್ಯಕ್ಷ ರಿಯಾಝ್ ಅಂಕತ್ತಡ್ಕ, ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪ್ಪಿನಂಗಡಿ ವಲಯ ಅಧ್ಯಕ್ಷ ರಿಝ್ವಾನ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.