HomePage_Banner
HomePage_Banner
HomePage_Banner

ಯಡಿಯೂರಪ್ಪ ಬದಲಾವಣೆ ಸಾಧ್ಯತೆ ಮತ್ತೆ ಸಿಎಂ ರೇಸ್‌ನಲ್ಲಿ ಡಿ.ವಿ.ಹೆಸರು?

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು:ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ಪಕ್ಷದ ಹೈಕಮಾಂಡ್ ನಿರ್ಧರಿಸಿದ್ದು ಇದು ನಿಜವೇ ಆಗಿದ್ದಲ್ಲಿ ಕೇಂದ್ರ ಸಚಿವರು, ಪುತ್ತೂರಿನ ಮಾಜಿ ಶಾಸಕರೂ ಆಗಿರುವ ಡಿ.ವಿ.ಸದಾನಂದ ಗೌಡ ಅವರು ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಅಧಿಕವಾಗಿದೆ ಎಂದು ರಾಜಕೀಯ ವಲಯಗಳಲ್ಲಿ ಸುದ್ದಿ ಹರಿದಾಡುತ್ತಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಇಲ್ಲವೇ ಪುನರ್ರಚನೆ ಸಂಬಂಧ ಚರ್ಚೆ ನಡೆಸಲು ದೆಹಲಿಗೆ ಹೋಗಿ ಬರಿಕೈಯಲ್ಲಿ ವಾಪಸಾಗಿದ್ದಾರೆ.ಈ ಮೊದಲು ಇದೇ ರೀತಿ ಹಲವು ಸಲ ಅವರಿಗಾಗಿದ್ದು ಸಂಪುಟ ವಿಸ್ತರಣೆಗೆ ಇಲ್ಲವೇ ಪುನರ್ರಚನೆಗೆ ಇನ್ನೂ ಹೈಕಮಾಂಡ್ ಅಂಕಿತ ಹಾಕುತ್ತಿಲ್ಲ.ಇದರಿಂದಾಗಿ ಅವರನ್ನು ಬದಲಾವಣೆ ಮಾಡಲು ಪಕ್ಷದ ಹೈಕಮಾಂಡ್ ನಿರ್ಧರಿಸಿದಂತಿದೆ.ಈಗಾಗಲೇ 75 ವರ್ಷ ದಾಟಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅವರ ಮಗ ವಿಜಯೇಂದ್ರರಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಸುದ್ದಿ ಹರಿದಾಡುತ್ತಿದೆ.
ಸಿಎಂ ರೇಸ್‌ನಲ್ಲಿ ಡಿ.ವಿ.ಹೆಸರು?
ಒಂದೊಮ್ಮೆ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದ್ದೇ ಆದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಬಗ್ಗೆಯೂ ಚರ್ಚೆಗಳಾಗುತ್ತಿವೆ.ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಪ್ರಸ್ತುತ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ನಿರ್ವಹಿಸುತ್ತಿರುವ, ಈ ಹಿಂದೆ ರೈಲ್ವೇಯಂತಹ ಪ್ರಮುಖ ಖಾತೆಯನ್ನೂ ನಿಭಾಯಿಸಿರುವ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿಯೂ ಕಳಂಕರಹಿತ ಆಡಳಿತ ನಡೆಸಿರುವ ಹೆಗ್ಗಳಿಕೆಯನ್ನು ಹೊಂದಿರುವ ಡಿ.ವಿ.ಸದಾನಂದ ಗೌಡ ಅವರ ಹೆಸರು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಕೇಳಿ ಬರುತ್ತಿದೆ.ಡಿ.ವಿ.ಸದಾನಂದ ಗೌಡರಲ್ಲದೆ ಪ್ರಸ್ತುತ ಕಂದಾಯ ಸಚಿವರಾಗಿರುವ ಆರ್.ಅಶೋಕ್ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಹೆಸರು ಕೂಡಾ ಕೇಳಿ ಬರುತ್ತಿದೆಯಾದರೂ ಮೋದಿ ಮತ್ತು ಅಮಿತ್ ಶಾ ಹಾಗೂ ಪಕ್ಷದ ಈಗಿನ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೆಲ್ಲರಿಗೂ ಆಪ್ತರಾಗಿರುವ ಡಿ.ವಿ.ಸದಾನಂದ ಗೌಡರ ಹೆಸರು ಮುಖ್ಯಮಂತ್ರಿ ರೇಸ್‌ನಲ್ಲಿ ನಂಬರ್ ವನ್ ಸ್ಥಾನದಲ್ಲಿದೆ ಎಂದೂ ರಾಜಕೀಯ ವಲಯಗಳಲ್ಲಿ ವ್ಯಾಪಕವಾಗಿ ಸುದ್ದಿಗಳು ಹರಿದಾಡುತ್ತಿವೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.