HomePage_Banner
HomePage_Banner
HomePage_Banner

ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಬೇಕೇ ಬೇಕು

Puttur_Advt_NewsUnder_1
Puttur_Advt_NewsUnder_1
  • ನ.23ರ ಚರ್ಚಾಕೂಟದಲ್ಲಿ ಪಕ್ಷಾತೀತವಾಗಿ ಭಾಗವಹಿಸಲು ಸಮಾನ ಮನಸ್ಕರಲ್ಲಿ ಶಕುಂತಳಾ ಶೆಟ್ಟಿ ಮನವಿ

ಪುತ್ತೂರು: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಬೇಕೇ ಬೇಕು ಎಂದು ಆಗ್ರಹಿಸಿ ನ.23ರಂದು ಪುತ್ತೂರಿನಲ್ಲಿ ನಡೆಯಲಿರುವ ಸಮಾನ ಮನಸ್ಕರ ಚರ್ಚಾಕೂಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸುವಂತೆ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮನವಿ ಮಾಡಿದ್ದಾರೆ. ಬನ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಕಾಯ್ದಿರಿಸಿರುವ ಜಾಗವನ್ನು ಇದೀಗ ಸರಕಾರ ಸೀ ಫುಡ್ ಪಾರ್ಕ್ ಗೆ ಮೀಸಲಿಟ್ಟ ಹಿನ್ನೆಲೆಯಲ್ಲಿ ಸಮಾನ ಮನಸ್ಕರ ಸಭೆ ಕರೆಯಲಾಗಿದೆ.

ನ.23ರಂದು ಸೋಮವಾರ ಅಪರಾಹ್ನ 2 ಗಂಟೆಗೆ ಮನೀಷಾ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು, ಬಹುದಿನಗಳ ಕನಸಾಗಿರುವ ಸರಕಾರಿ ಮೆಡಿಕಲ್ ಕಾಲೇಜು ಪುತ್ತೂರಿಗೆ ಬೇಕೇ ಬೇಕು ಎನ್ನುವ ನಿಟ್ಟಿನಲ್ಲಿ ಸಮಾನ ಮನಸ್ಕರು ಪಕ್ಷಾತೀತವಾಗಿ ಸಾರ್ವಜನಿಕರು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳೊಂದಿಗೆ ಚರ್ಚಾ ಕೂಟದಲ್ಲಿ ಭಾಗವಹಿಸುವಂತೆ ಶಕುಂತಳಾ ಟಿ.ಶೆಟ್ಟಿರವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.