HomePage_Banner
HomePage_Banner
HomePage_Banner
HomePage_Banner

ಸಾಂದೀಪನಿಯಲ್ಲಿ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಜಯಂತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 95ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಹಿರಿಯ ಆಧ್ಯಾತ್ಮಿಕ ಚಿಂತಕರಾದ ಗೋಪಾಲಕೃಷ್ಣ ಕಡಂಬಳಿತ್ತಾಯರು ಮಾತನಾಡಿ ಭಗವಾನ್ ಬಾಬಾರವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿದಾಗ ಪರಿಪೂರ್ಣ ಜೀವನ ನಮ್ಮದಾಗಲು ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ ಮಾತನಾಡುತ್ತಾ ಬಾಬಾರವರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿದಾಗ ಜೀವನ ಸಾರ್ಥಕ್ಯವನ್ನು ಪಡೆಯುತ್ತದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಚಾಲಕರಾದ ಭಾಸ್ಕರ ಆಚಾರ್ ಹಿಂದಾರು, ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಕೆದಿಲಾಯ, ಸದಸ್ಯರಾದ  ಪ್ರಸನ್ನ ಭಟ್ ಶುಭವನ್ನು ಕೋರಿದರು. ಶಾಲಾ ಸಂಚಾಲಕರ ಮಾತೃ ಶ್ರೀಯವರಾದ  ಸುಮಿತ್ರಾ ಆಚಾರ್ ಎಲ್ಲರಿಗೂ ಕಾಣಿಕೆಗಳನ್ನು ನೀಡಿ ಶುಭ ಕೋರಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಮಾಲಾ ವಿ.ಎನ್ ಸ್ವಾಗತಿಸಿದರು. ಕುಮಾರಿ ಅವನಿ ಪ್ರಾರ್ಥನೆ ಹಾಡಿದರು. ಶಿಕ್ಷಕರಾದ  ಹರೀಶ್ ವಂದಿಸಿದರು.

ಕಾರ್ಯಕ್ರಮದ ನಂತರ ಸಾಯಿ ಬಾಬಾರವರ ಭಜನೆ ಕಾರ್ಯಕ್ರಮ ನಡೆಯಿತು. ನಂತರ ಎಲ್ಲರಿಗೂ ಸಿಹಿ ಭೋಜನ ಪ್ರಸಾದವನ್ನು ಹಿಂದಾರು ಕುಟುಂಬದವರು ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.