HomePage_Banner
HomePage_Banner
HomePage_Banner
HomePage_Banner

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ; ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಅಕ್ರಮ, ಕಾಂಗ್ರೆಸ್ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಈ ಚುನಾವಣೆಯನ್ನು ರದ್ದುಪಡಿಸಬೇಕು ಮತ್ತು ಅಕ್ರಮ ಎಸಗಲು ಸಹಕಾರ ನೀಡಿದ ಚುನಾವಣಾಧಿಕಾರಿಯ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ‍್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೂರುಗೋಳಿಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ‍್ಯಕರ್ತರು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ ಚುನಾವಣಾ ಪ್ರಕ್ರಿಯೆ ನಡೆದು ಪ್ರವೀಣ್ ರೈ ಅಧ್ಯಕ್ಷರಾಗಿ, ಪಾರ್ಶ್ವನಾಥ ರೈ ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಘೋಷಣೆ ಆಗಿತ್ತು. ಆದರೆ ಮಧ್ಯಾಹ್ನದ ಬಳಿಕ ಎರಡನೇ ಬಾರಿ ಚುನಾವಣೆ ನಡೆಸಿ ಪ್ರಸನ್ನ ಗೌಡ ಅಧ್ಯಕ್ಷ, ಪ್ರವೀಣ್ ರೈ ಉಪಾಧ್ಯಕ್ಷ ಎಂದು ಘೋಷಣೆ ಮಾಡಲಾಗಿದೆ. ಈ ರೀತಿಯಾಗಿ ಎರಡನೇ ಬಾರಿಗೆ ಅಕ್ರಮವಾಗಿ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿ ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಚುನಾವಣಾಧಿಕಾರಿ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ:
ಬೆಳಿಗ್ಗೆ ಚುನಾವಣಾ ನಿಯಮಾವಳಿ ಪ್ರಕಾರ ಚುನಾವಣೆ ನಡೆದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬಗ್ಗೆ ಘೋಷಣೆ ಆಗಿದೆ. ತದ ನಂತರ ನಿರ್ದೇಶಕರು ಮನೆಗೆ ಹೋದ ಬಳಿಕ ಮತ್ತೆ ಕೆಲವು ಸದಸ್ಯರುಗಳನ್ನು ಕರೆಸಲಾಗಿ, ರಾಜಕೀಯ ಒತ್ತಡಕ್ಕೆ ಮಣಿದು ಕಾನೂನು ಬಾಹಿರವಾಗಿ, ಸಂವಿಧಾನಕ್ಕೆ ಮತ್ತು ಸಹಕಾರಿ ನಿಯಮ, ನಿಬಂಧನೆಗಳಿಗೆ ವಿರುದ್ಧವಾಗಿ ಯಾರದೋ ಒತ್ತಡಕ್ಕೆ ಮಣಿದು ಚುನಾವಣಾಧಿಕಾರಿ ಎರಡನೇ ಬಾರಿ ಚುನಾವಣೆ ನಡೆಸಿದ್ದು, ಇದು ಅಕ್ರಮ ಮತ್ತು ಆಕ್ಷೇಪಾರ್ಹವಾಗಿದ್ದು, ಇದನ್ನು ರದ್ದುಪಡಿಸಬೇಕು ಮತ್ತು ಚುನಾವಣಾ ಅಧಿಕಾರಿ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.

ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಕೆ. ಶಾಹುಲ್ ಹಮೀದ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ಮನೋಹರ ಮಾತನಾಡಿದರು.
ತಣ್ಣೀರುಪಂತ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯವಿಕ್ರಂ, ಇಳಂತಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೂಸುಫ್ ಪೆದಮಲೆ, ತೆಕ್ಕಾರು ಸಿ.ಎ. ಬೇಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಶರತ್, ಬಾರ‍್ಯ ಸಹಕಾರಿ ಬೇಂಕ್ ಮಾಜಿ ನಿರ್ದೇಶಕರಾದ ನವೀನ್ ರೈ, ಉಸ್ಮಾನ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳಾದ ಸುಲೈಮಾನ್, ಡಿ.ಕೆ. ಅಯ್ಯೂಬ್, ಜಯಾನಂದ ಬೆಳಾಲು ಇದ್ದರು.

ಮಾಹಿತಿ ಪಡೆದುಕೊಂಡು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುತ್ತೇನೆ-ಉಪ ನಿಬಂಧಕರು
ಚುನಾವಣಾ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಪ್ರತಿಭಟನಾಕಾರರು ನೀಡಿದ ಮನವಿಗೆ ದ.ಕ. ಜಿಲ್ಲಾ ಸಹಕಾರಿ ಇಲಾಖೆಯ ಉಪ ನಿಬಂಧಕ ಪ್ರವೀಣ್ ಪ್ರತಿಕ್ರಿಯಿಸಿ ಮಾತನಾಡಿ ನಿನ್ನೆ ನಡೆದಿರುವ ಚುನಾವಣೆ ಮತ್ತು ಅಕ್ರಮ ಆರೋಪದ ಬಗ್ಗೆ ಮಾಹಿತಿ ಪಡೆದುಕೊಂಡು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.