HomePage_Banner
HomePage_Banner
HomePage_Banner
HomePage_Banner

ಪೆರಿಯಶಾಂತಿ: ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಇಲ್ಲಿಗೆ ಸಮೀಪದ ಪೆರಿಯಶಾಂತಿಯಲ್ಲಿ ಹೆದ್ದಾರಿ ಬದಿ ತ್ಯಾಜ್ಯ ತಂದು ಹಾಕುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಲಾಗಿದೆ.

ಸುಬ್ರಹ್ಮಣ್ಯ-ಮರ್ದಾಳ-ಪೆರಿಯಶಾಂತಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಸಮೀಪದ ಪೆರಿಯಶಾಂತಿ ರಾಜ್ಯ ಹೆದ್ದಾರಿಯ ಅರಣ್ಯ ಭಾಗದಲ್ಲಿ ರಸ್ತೆ ಬದಿಗೆ ಶುಭ ಸಮಾರಂಭವೊಂದರಲ್ಲಿ ಬಳಸಲಾಗಿದ್ದ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ. ಹಾಗೂ ಇತರರು ತ್ಯಾಜ್ಯ ಸುರಿಯುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡು ಬಳಿಕ ಕೌಕ್ರಾಡಿ ಗ್ರಾ.ಪಂ.ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪಂಚಾಯತ್ ಅಧಿಕಾರಿಗಳು ತ್ಯಾಜ್ಯ ಎಸೆದ ವ್ಯಕ್ತಿ ಸಹಿತ ತ್ಯಾಜ್ಯ ಹಾಗೂ ವಾಹನವನ್ನು ತಮ್ಮ ವಶಕ್ಕೆ ಪಡೆದರು. ಬಳಿಕ ಪಂಚಾಯತ್ ನಿರ್ಣಯದಂತೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.