ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಗ್ರಾಮ ಪಂಚಾಯತ್ ನೆಲ್ಯಾಡಿ, ಜೇಸಿಐ ನೆಲ್ಯಾಡಿ ಹಾಗೂ ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ/ತಡೆಗಟ್ಟುವಿಕೆ ಕುರಿತ ಜಾಗೃತಿ ಜನಾಂದೋಲನಾ ಕಾರ್ಯಕ್ರಮ ನ.25ರಂದು ನೆಲ್ಯಾಡಿಯಲ್ಲಿ ನಡೆಯಿತು.
ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಾಂದೋಲನ ಕಾರ್ಯಕ್ರಮಕ್ಕೆ ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ಚಾಲನೆ ನೀಡಿದರು. ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ರವರು ಕೋವಿಡ್-೧೯ ಜಾಗೃತಿ ಜನಾಂದೋಲನದ ಕುರಿತಂತೆ ಮಾತನಾಡಿದರು. ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ನ ಧರ್ಮಗುರು ರೆ.ಫಾ.ಆದರ್ಶ್ ಜೋಸೆಫ್, ನೆಲ್ಯಾಡಿ ತಾ.ಪಂ.ಸದಸ್ಯೆ ಉಷಾ ಅಂಚನ್, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಮಾಜಿ ಸದಸ್ಯರುಗಳಾದ ಉಷಾ ಜೋಯಿ, ಮೋಹಿನಿ, ಪಿಡಿಒ ಮಂಜುಳ ಎನ್., ಕಾರ್ಯದರ್ಶಿ ದೇವರಾಜ್, ನೆಲ್ಯಾಡಿ ಜೆಸಿಐ ಅಧ್ಯಕ್ಷ ಶಿವಪ್ರಸಾದ್, ಪೂರ್ವಾಧ್ಯಕ್ಷ ಡಾ.ಸದಾನಂದ ಕುಂದರ್, ನಿಯೋಜಿತ ಅಧ್ಯಕ್ಷ ಗಿರೀಶ್, ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ.ಕೆ., ಸೇರಿದಂತೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಸಿಬ್ಬಂದಿಗಳು, ನೆಲ್ಯಾಡಿ ಜೆಸಿಐ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಜನಾಂದೋಲನ ಜಾಥಾದಲ್ಲಿ ಪಾಲ್ಗೊಂಡಿದ್ದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸೌಮ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಉಪನ್ಯಾಸಕ, ಎನ್ಎಸ್ಎಸ್ ಘಟಕಾಧಿಕಾರಿ ವಿಶ್ವನಾಥ ಶೆಟ್ಟಿ ನಿರೂಪಿಸಿದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆರಂಭಗೊಂಡ ಜಾಗೃತಿ ಜನಾಂದೋಲನಾ ಜಾಥಾ ನೆಲ್ಯಾಡಿ ಪೇಟೆಯ ತನಕ ತೆರಳಿ ಮತ್ತೆ ಆಸ್ಪತ್ರೆ ಆವರಣದಲ್ಲಿ ಕೊನೆಗೊಂಡಿತು. ಜಾಥಾದ ವೇಳೆ ಕೋವಿಡ್-೧೯ ಹರಡದಂತೆ ತಡೆಯುವ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.
ಜೆಸಿಐನಿಂದ ಕರಪತ್ರ ಬಿಡುಗಡೆ:
ಕಾರ್ಯಕ್ರಮದಲ್ಲಿ ನೆಲ್ಯಾಡಿ ಜೇಸಿಐ ವತಿಯಿಂದ ‘ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನ’ಕುರಿತ ಕರಪತ್ರ ಬಿಡುಗಡೆ ಹಾಗೂ ಬಯೋ ಪ್ಲಾಸ್ಟಿಕ್ ಬ್ಯಾಗ್ ಬಿಡುಗಡೆಗೊಳಿಸಲಾಯಿತು. ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ಕರಪತ್ರ ಬಿಡುಗಡೆಗೊಳಿಸಿದರು. ಜೆಸಿಐ ಅಧ್ಯಕ್ಷ ಶಿವಪ್ರಸಾದ್ ಮಾಹಿತಿ ನೀಡಿದರು.