ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕಡಬ ತಾಲೂಕು ಕಚೇರಿಯ ಯನ್ನು ಸುಳ್ಯ ಶಾಸಕ ಶಾಸಕ ಎಸ್ ಅಂಗಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಡಬ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಧ.ಗ್ರಾ.ಯೋ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಲ್.ಎಚ್.ಮಂಜುನಾಥ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಮಾಜಿ ಜಿ.ಪ ಸದಸ್ಯ ಸೈಯದ್ ಮೀರಾ ಸಾಹೇಬ್, ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಮಾಜಿ ಜಿ.ಪಂ. ಸದಸ್ಯ ಕೃಷ್ಣ ಶೆಟ್ಟಿ ಕಡಬ, ಪುತ್ತೂರು ಕೆನರಾ ಬ್ಯಾಂಕಿನ ಎ.ಜಿ.ಎಮ್. ನಂಜುಂಡಪ್ಪ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ,ಕಡಬ ಗಣೇಶ್ ಬಿಲ್ಡಿಂಗ್ ಮಾಲಕ ಸುಂದರ ಗೌಡ ಮಂಡೆಕರ ಉಪಸ್ಥಿತರಿದ್ದರು. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್ ಸ್ವಾಗತಿಸಿದರು. ಕೃಷಿ ಅಧಿಕಾರಿ ಉಮೇಶ್ ಬಿ ನಿರೂಪಿಸಿದರು. ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್. ಕಡಬ ಮೇಲ್ವಿಚಾರಕ ಬಾಬು ಸೇರಿದಂತೆ ಸೇವಾ ಪ್ರತಿನಿಧಿಗಳು ಸದಸ್ಯ ರುಗಳು ಉಪಸ್ಥಿತರಿದ್ದರು.