HomePage_Banner
HomePage_Banner
HomePage_Banner
HomePage_Banner

ಬನ್ನೂರು ರೈತರ ಸೇವಾ ಸಹಕಾರಿ ಬ್ಯಾಂಕಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಪ್ರದಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ತನ್ನ ವಿಶೇಷ ಸಾಧನೆಗಾಗಿ ಬನ್ನೂರು ರೈತರ ಸೇವಾ ಸಹಕಾರಿ ಸಂಘ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನ.27ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪ್ರದಾನ ಮಾಡಿದರು. ಬನ್ನೂರು ರೈತರ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ರವರು ಡಾ.ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ್ ಜೈನ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಎಸ್‌ಬಿ ಜಯರಾಮ ರೈ, ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ, ಜಿಲ್ಲಾ ಸಹಕಾರಿ ಯೂನಿಯನ್ ಅದ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.