ಚಿತ್ರ- ನವೀನ್ ರೈ ಪಂಜಳ
- ನಯನಾ ರೈಯವರ ಸಾಧನೆ ಬಂಟ ಸಮಾಜಕ್ಕೆ ಗೌರವ- ಮೀರಾ ಭಾಸ್ಕರ್ ರೈ
ಪುತ್ತೂರು: ತಾಲೂಕು ಮಹಿಳಾ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇವರ ಮಾರ್ಗದರ್ಶನದಲ್ಲಿ ತಾ ಲೂಕು ಬಂಟರ ಸಂಘ, ಯುವ ಬಂಟರ ಸಂಘ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಯೋಗದೊಂದಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಯನಾ ವಿ.ರೈ ಕುದ್ಕಾಡಿರವರನ್ನು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಚಾವಾಡಿ ತಮ್ಮನದ ಮೂಲಕ ಸನ್ಮಾನಿಸಿ, ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಮೀರಾ ಭಾಸ್ಕರ್ ರೈ ಮಾದೋಡಿರವರು ಮಾತನಾಡಿ ನಯನಾ ವಿ.ರೈರವರು ಕಲಾ ಕ್ಷೇತ್ರದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರು ಶಿಕ್ಷಕಿಯಾಗಿ, ಭರತ ನಾಟ್ಯ ಕಲಾವಿದೆಯಾಗಿ ಸಾವಿರಾರು ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳಕಿಗೆ ತಂದು ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದಾರೆ, ಇವರ ಸಾಧನೆಯು ಬಂಟ ಸಮಾಜಕ್ಕೆ ವಿಶೇಷವಾದ ಗೌರವವನ್ನು ತಂದಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ತಾಲೂಕು ಬಂಟರ ಸಂಘದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಾತೃ ಸಂಘದ ನಿರ್ದೇಶಕ ಚಂದ್ರಹಾಸ್ ಶೆಟ್ಟಿ ಎನ್, ಜಿ.ಪಂ, ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಮಹಿಳಾ ಬಂಟರ ಸಂಘದ ಮಾಜಿ ಅಧ್ಯಕ್ಷೆ ಕುಮುದಾ ಎಲ್.ಎನ್.ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಹರಿಣಾಕ್ಷಿ ಜೆ.ಶೆಟ್ಟಿ ನೆಲ್ಲಿಕಟ್ಟೆ, ಶ್ರೀ ರಾಮಕೃಷ್ಣ ಪ್ರೌಡಶಾಲೆಯ ಮುಖ್ಯಶಿಕ್ಷಕಿ ರೂಪಕಲಾ, ಮಹಿಳಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ವತ್ಸಲಾ ಪಿ.ಶೆಟ್ಟಿ, ಕೋಶಾಧಿಕಾರಿ ಅನುಶ್ರೀ ಹಾಗೂ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಬಂಟರ ಭವನದ ಭಾಸ್ಕರ್ ರೈ, ರವಿಚಂದ್ರ ರೈ ಕುಂಬ್ರರವರುಗಳು ಉಪಸ್ಥಿತರಿದ್ದರು.