- ಪ್ರತಿ ಗ್ರಾಮ ಗ್ರಾಮದಲ್ಲಿ ಯುವ ಬಂಟರ ಸಂಘದ ಸಮಿತಿ ರಚನೆ- ಪ್ರಕಾಶ್ ರೈ
ಪುತ್ತೂರು: ತಾಲೂಕು ಯುವ ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು.
ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆರವರು ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿ ತಾಲೂಕು ಯುವ ಬಂಟರ ಸಂಘದ ವತಿಯಿಂದ ತಾಲೂಕಿನ ಪ್ರತಿ ಗ್ರಾಮ ಗ್ರಾಮದಲ್ಲಿ ಯುವ ಬಂಟರ ಸಂಘದ ಗ್ರಾಮ ಸಮಿತಿಯನ್ನು ರಚಿಸಿ, ಆಮೂಲಕ ಯುವ ಬಂಟರನ್ನು ಸಂಘಟಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಹೇಳಿದರು. ಯುವ ಬಂಟರ ಸಂಘದಿಂದ ಸಂಘದ ಚಟುವಟಿಕೆಗಳ ಬಗ್ಗೆ ಯೂಟ್ಯೂಬ್ವೊಂದನ್ನು ಪ್ರಾರಂಬಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಡಿಸೆಂಬರ್ ತಿಂಗಳಲ್ಲಿ ಯುವ ಬಂಟರ ಕ್ರಿಕೆಟ್ ಪಂದ್ಯಾಟ ಮತ್ತು ಜನವರಿಯಲ್ಲಿ ಯುವ ಬಂಟರ ದಿನಾಚರಣೆ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.
ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಕೋಶಾಧಿಕಾರಿ ನವೀನ್ ರೈ ಪಂಜಳ, ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಕಾರ್ಯಕಾರಿ ಸಮಿತಿಯ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸಚಿನ್ ಶೆಟ್ಟಿ, ಕೆ.ಸಿ. ಅಶೋಕ್ ಶೆಟ್ಟಿ,
ಸನತ್ ರೈ ಎಳ್ನಾಡುಗುತ್ತು, ಉಮಾಪ್ರಸಾದ್ ರೈ ನಡುಬೈಲುರವರುಗಳು ಉಪಸ್ಥಿತರಿದ್ದರು.