ನಿಡ್ಪಳ್ಳಿ: ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ 2019-20 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ನ.30 ರಂದು ಬೆಳಿಗ್ಗೆ 10.30 ಕ್ಕೆ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಹಾಲು ಒಕ್ಕೂಟದ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಸಂಘದ ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಎ ತಿಳಿಸಿದ್ದಾರೆ.