HomePage_Banner
HomePage_Banner
HomePage_Banner
HomePage_Banner

ಹೊಸಮಠ ನಾಡೋಳಿಯಲ್ಲಿ ಅಕ್ರಮ ಮರಳು ದಂಧೆ | ಮರಳು ಸಾಗಾಟದ ವಾಹನ ವಶಕ್ಕೆ, ಎರಡು ವಾಹನಗಳು ಪರಾರಿ ಶಂಕೆ?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕುಟ್ರುಪಾಡಿ ಗ್ರಾಮದ ನಾಡೋಳಿಯಲ್ಲಿ ಅಕ್ರಮ ಮರಳು ದಂದೆ ನಡೆಯುತ್ತಿದ್ದು, ನ.28ರ ರಾತ್ರಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಒಂದು ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಸಂದರ್ಭದಲ್ಲಿ ಎರಡು ವಾಹನಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈಗಾಗಲೇ ಕುಮಾರಧಾರ ಹಾಗೂ ಗುಂಡ್ಯ ಹೊಳೆಯಲ್ಲಿ ಅಕ್ರಮ ಮರಳು ದಂದೆ ನಿರಂತರವಾಗಿ ನಡೆಯುತ್ತಿದ್ದು, ಈ ದಂದೆಯನ್ನು ನಿಯಂತ್ರಿಸುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉಂಟಾಗಿದೆ. ಅಕ್ರಮ ಮರಳು ದಂದೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತವಾಗಿದೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.