HomePage_Banner
HomePage_Banner
HomePage_Banner
HomePage_Banner

ದಲಿತ್ ಸೇವಾ ಸಮಿತಿಯಿಂದ ಪ.ಶಿ.ಜಾ/ಪ.ಶಿ.ಪಂ ಸರಕಾರಿ ನೌಕರರ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಲಿತ್ ಸೇವಾ ಸಮಿತಿಯಿಂದ ಪ.ಜಾತಿ/ಪ.ಪಂಗಡದ ಸರಕಾರಿ ನೌಕರರ ಸಮಾಲೋಚನಾ ಸಭೆ ನ.29ರಂದು ಇಲ್ಲಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಮಾತನಾಡಿ ಸರಕಾರಿ ನೌಕರರಿಗೆ ಯಾವ ರೀತಿಯ ಅನ್ಯಾಯ ಆದರೂ ನ್ಯಾಯ ಕೊಡುವ ಕೆಲಸ ಸಂಘಟನೆ ಮೂಲಕ ಮಾಡಿದ್ದೇವೆ. ತಾಲೂಕಿನ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಅಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರನು ಭೇಟಿ ಮಾಡಿ ಒಟ್ಟು ಸೇರಿಸಿ ಮುಂದೆ ಡಿ.29ಕ್ಕೆ ಮಹತ್ವದ ಸಭೆ ನಡೆಸಲಾಗುವುದು ಎಂದರು. ಸಭೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ನಿಗಮ, ಗ್ರಾ.ಪಂ, ಲೋಕೋಪಯೋಗಿ ಇಲಾಖೆ ಮತ್ತು ಇತರ ಇಲಾಖೆಯ ನೌಕರರು ಸಭೆಯಲ್ಲಿ ಉಪಸ್ಥಿತರಿದ್ದರು. ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು, ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಮಂಗಳೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ವಿಟ್ಲ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.