ಉಪ್ಪಿನಂಗಡಿ: ತನ್ನ ಕಾರ್ಯಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸೇವೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕ್ ಮಂಗಳೂರು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕ್ ಮಂಗಳೂರುನಲ್ಲಿ ಈಚೆಗೆ ನಡೆದ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿದರು. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜತ್ತಪ್ಪ ಗೌಡ ಪ್ರಶಸ್ತಿಯನ್ನು ಸ್ವೀಕರಿಸಿದರು.