HomePage_Banner
HomePage_Banner
HomePage_Banner
HomePage_Banner

ಬನ್ನೂರು ಸ್ಪೂರ್ತಿ ಯುವ ಸಂಸ್ಥೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ, ಮತ್ತು ಸ್ಫೂರ್ತಿ ಯುವ ಸಂಸ್ಥೆ ಬನ್ನೂರು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ರಕ್ಷಣಾ ದಿನ ಎಂಬ ವಿಷಯದ ಕುರಿತು ಕಾನೂನು ಮಾಹಿತಿ ಕಾರ್ಯಕ್ರಮವನ್ನು ನ.29ರಂದು ರಂದು ಬನ್ನೂರು ಸ್ಫೂರ್ತಿ ಯುವ ಸಂಸ್ಥೆ ಶಾಲಾ ಬಳಿ ನಡೆಯಿತು.

ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಎ.ಪಿ.ಜೆ.ಎಂ. ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮಂಜುನಾಥ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ೨ ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜಿ ನ್ಯಾಯಿಕ ದಂಡಾಧಿಕಾರಿಯವರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಪ್ರಭಾರ ಸದಸ್ಯ ಕಾರ್ಯದರ್ಶಿ ವೆಂಕಟೇಶ ಎನ್, ಹಾಗೂ ಸ್ಪೂರ್ತಿ ಯುವ ಸಂಸ್ಥೆ ಸಂಚಾಲಕ ದಿನೇಶ್ ಸಾಲಿಯನ್, ಸಂಚಾಲಕರು, ನಗರಸಭೆ ಸದಸ್ಯೆ ಗೌರಿ ಬನ್ನೂರು, ಸ್ಪೂರ್ತಿ ಯುವ ಸಂಸ್ಥೆಯ ಅಧ್ಯಕ್ಷ ಹರೀಶ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯೋಗ ಕೇಂದ್ರದ ಅಧ್ಯಕ್ಷ ನ್ಯಾಯವಾದಿ ಶ್ರೀಗಿರೀಶ್ ಮಳಿಯವರು ಪರಿಸರ ರಕ್ಷಣಾ ಕುರಿತು ಮಾಹಿತಿಯನ್ನು ನೀಡಿದರು. ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ಪೂರ್ತಿ ಯುವ ಸಂಸ್ಥೆಯ ಸಂಚಾಲಕ ದಿನೇಶ್ ಸಾಲಿಯನ್ ಸ್ವಾಗತಿಸಿ, ಅಧ್ಯಕ್ಷ ಹರೀಶ್ ಬಿ.ಎನ್. ವಂದಿಸಿದರು. ನ್ಯಾಯವಾದಿ ರಾಜೇಶ್ವರಿ ಎಂ ಕಾರ್ಯಕ್ರಮ ಸಂಯೋಜಿಸಿದರು. ಸಹಾಯಕ ತಾಲೂಕು ಕಾನೂನು ಸೇವೆಗಳ ಸಮಿತಿಯ ಡಿ. ರಂಗಪ್ಪ ಪೂಜಾರಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.