ಬೆಂಗಳೂರು: ಪುತ್ತೂರಿನ ಬಲ್ನಾಡು ಮೂಲದ, ಪ್ರಸ್ತುತ ಬಂಟ್ವಾಳ ತಾಲೂಕಿನ ಬೋಳಿಯಾರ್ನಲ್ಲಿರುವ ಸಂತೋಷ್ ಕುಮಾರ್ ಬೋಳಿಯಾರ್ ಅವರು ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಯಶವಂತಪುರದ ಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂತೋಷ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಕಪಿಲ್ ಮೋಹನ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಳಿಗ್ಗೆ ಗಣಹೋಮ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಂತೋಷ್ ಕುಮಾರ್ ಭೇಟಿಯಾಗಿದ್ದಾರೆ.
ಸಂತೋಷ್ ಕುಮಾರ್ ಅವರ ತಂದೆ ಹುಕ್ರಪ್ಪ ಎಸ್. ಅವರು ಮೂಲತಃ ಪುತ್ತೂರಿನ ಬಲ್ನಾಡು ಗ್ರಾಮದ ಬೆಳಿಯೂರು ಬೀಡಿನವರು. ಇದೀಗ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದಾರೆ.