HomePage_Banner
HomePage_Banner
HomePage_Banner
HomePage_Banner

ಉಕ್ಕುಡ: ಬೈಕ್ – ಪಿಕಪ್ ಮಧ್ಯೆ ಅಪಘಾತ : ಬೈಕ್ ಸವಾರನಿಗೆ ಗಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಬೈಕ್ ಹಾಗೂ ಪಿಕಪ್ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.೧ರಂದು ವಿಟ್ಲ – ಕಾಸರಗೋಡು ರಸ್ತೆಯ ಉಕ್ಕುಡ ಎಂಬಲ್ಲಿ ನಡೆದಿದೆ‌.

ವಿಟ್ಲ ಭಾಗದಿಂದ ಪೆರ್ಲ ಭಾಗಕ್ಕೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಪಿಕಪ್ ವಾಹನದ ಮುಂಭಾಗದ ಚಕ್ರದಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಘಟನೆಯಿಂದಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ತಿಳಿದುಬಂದಿದೆ‌. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಎಸ್.ಐ. ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.