HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ರೋಟರಿ ವತಿಯಿಂದ ದೀಪಾವಳಿ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿಯ ವತಿಯಿಂದ ದೀಪಾವಳಿ ಆಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಇಲ್ಲಿನ ರೋಟರಿ ಸಭಾ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಸಹಾಯಕ ಗವರ್ನರ್ ಡಾ. ಯತಿಕುಮಾರಸ್ವಾಮಿ ಗೌಡ ಮಾತನಾಡಿ, ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಸಕ್ರೀಯವಾಗಿರುವ ಉಪ್ಪಿನಂಗಡಿ ರೋಟರಿ ಕ್ಲಬ್‌ನ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಮುಖ್ಯ ಭಾಷಣ ಮಾಡಿದ ನಿವೃತ್ತ ಶಿಕ್ಷಕ ಗೋಪಾಲ ಶೆಟ್ಟಿ, ದೀಪಾವಳಿ ಹಬ್ಬದ ವೈಶಿಷ್ಟ್ಯವನ್ನು ಮತ್ತು ಮಹತ್ವವನ್ನು ಸವಿವರವಾಗಿ ತಿಳಿಸಿದರು.

ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ವೆಂಕಟೇಶ್ ದಾಮ್ಲೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿ ಸುಹಾಸ್ ಎಂ. ಕೆ. ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಉಪ್ಪಿನಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ರವೀಂದ್ರ ದರ್ಬೆ ಮಾತನಾಡಿ, ಸರ್ವ ಧರ್ಮೀಯರು ಆಚರಿಸುವ ದೀಪಾವಳಿ ಹಬ್ಬ ಸೌಹಾರ್ದತೆಯ ಸಂಕೇತವಾಗಿದೆ ಎಂದರು.

ವಲಯ ಸೇನಾನಿ ಜೆರೋಮಿಯಸ್ ಪಾಯಸ್ ಹಾಗೂ ನಿಕಟಪೂರ್ವ ಅಧ್ಯಕ್ಷ, ಬಿಎಸ್ಸೆಫ್‌ನ ನಿವೃತ ಕಮಾಡೆಂಟ್ ಚಂದಪ್ಪ ಮೂಲ್ಯ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಜಗದೀಶ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಮಾನ್ಯ ಪ್ರಾರ್ಥಿಸಿದರು. ಸ್ವರ್ಣೇಶ್ ವಂದಿಸಿದರು. ಡಾ. ರಾಜಾರಾಮ ಕೆ.ಬಿ. ಕಾರ್ಯಕ್ರಮ ನಿರೂಪಿಸಿದರು. ವಿಜಯಕುಮಾರ್ ಕಲ್ಲಳಿಕೆ, ದಿವಾಕರ ಆಚಾರ್ಯ, ನೀರಜ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.